ಸಮಗ್ರ ಸುದ್ದಿ

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ- ಸಚಿವ ಈಶ್ವರ್ ಖಂಡ್ರೆ |ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು

Share

ಬೆಂಗಳೂರು:ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲು ಹಳಿ ತಡೆಗೋಡೆ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಈಶ್ವರ್‍ಖಂಡ್ರೆ ತಿಳಿಸಿದರು.

ವಿಧಾನ ಪರಿಷತಿನಲ್ಲಿಂದು ಶೂನ್ಯವೇಳೆಯಲ್ಲಿ ಸದಸ್ಯರಾದ ಸುಜಾ ಕುಶಾಲಪ್ಪ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಫೆಬ್ರವರಿ 28ರಂದು ಕಾಡಿನಂಚಿನ ನಿವಾಸಿ 17 ವರ್ಷದ ಬಾಲಕಿ ಆನೆ ದಾಳಿಯಿಂದ ಮೃತಪಟ್ಟಿದ್ದು, ಮಾರ್ಚ್ 9ರಂದು ಕಾಡಿನೊಳಗೆ ವಾಸಿಸುತ್ತಿದ್ದ 55 ವರ್ಷದ ಬುಡಕಟ್ಟು ಮಹಿಳೆ ಸಾವಿಗೀಡಾಗಿದ್ದಾರೆ ಇದು ಅತ್ಯಂತ ನೋವಿನ ಸಂಗತಿ ಎಂದರು.

ಜೀವ ಅತ್ಯಂತ ಅಮೂಲ್ಯವಾದದ್ದು, ಇದಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಅರಣ್ಯ ಇಲಾಖೆ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆನೆ ನಿಗ್ರಹ ಕಂದಕ, ಸೌರ ವಿದ್ಯುತ್ ಬೇಲಿ ನಿರ್ವಹಣೆ ಮಾಡಲಾಗುತ್ತಿದೆ. 2 ಆನೆ ಕಾರ್ಯಪಡೆ ಕಾರ್ಯನಿರ್ವಹಿಸುತ್ತಿದೆ. ಈಗ 2 ಪುಂಡಾನೆಗಳ ಸೆರೆಗೆ ಮುಖ್ಯ ವನ್ಯಜೀವಿ ಪರಿಪಾಲಕರು ಆದೇಶ ನೀಡಿದ್ದಾರೆ ಎಂದು ತಿಳಿಸಿದರು.

ಈ ಎರಡೂ ಪ್ರಕರಣದಲ್ಲಿ ಈಗಾಗಲೇ 5 ಲಕ್ಷ ರೂ. ಪರಿಹಾರವನ್ನು ಮೃತರ ಹತ್ತಿರದ ಬಂಧುಗಳಿಗೆ ವಿತರಿಸಲಾಗಿದ್ದು, ವಾರದೊಳಗೆ ಉಳಿಕೆ ತಲಾ 15 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಶಾಶ್ವತ ಪರಿಹಾರ ಕ್ರಮಗಳ ಬಗ್ಗೆಯೂ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.


Share

You cannot copy content of this page