ಸಮಗ್ರ ಸುದ್ದಿ

ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸುತ್ತಿದ್ದ ಸಿಲಿಂಡರ್ ವಶ – ಕನಗವಲ್ಲಿ | ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ

Share

ಬೆಂಗಳೂರು: ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಸಚಿವರು ಸೂಚಿಸಿದ್ದು ಅದರಂತೆ ಗೃಹ ಬಳಕೆ ಸಿಲಿಂಡರ್ ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಬೆಂಗಳೂರಿನ ಪಿಣ್ಯ ದಲ್ಲಿ 45, ಚಿಕ್ಕಜಾಲದಲ್ಲಿ 209 ಶಿವಮೊಗ್ಗ ಜಿಲ್ಲೆಯಲ್ಲಿ 3, ಯಾದಗಿರಿ ಜಿಲ್ಲೆಯಲ್ಲಿ 46 ದಾವಣಗರೆ 13 ಅಗತ್ಯ ವಸ್ತುಗಳ ಕಾಯ್ದೆ 1955 ರ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿ ವಶಪಡಿಸಿಕೊಳ್ಳಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಕನಗವಲ್ಲಿ ಅವರು ತಿಳಿಸಿದರು.

ಕೋಲಾರ ಜಿಲ್ಲೆಯ ಕೆಜಿಎಪ್ ನಲ್ಲಿ ಅಕ್ರಮ ರೀಪಿಲ್ಲಿಂಗ್ ನಡೆಸುತ್ತಿದ್ದ ಗ್ಯಾಸ್ ಏಜೆನ್ಸಿ ಅಂಗಡಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಒಟ್ಟು ಶೇ 20% ಸಿಲಿಂಡರ್ ಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚನೆಗಳಂತೆ ಆಸ್ಪತ್ರೆ, ಶಾಲಾ ,ಶಿಕ್ಷಣ ಸಂಸ್ಥೆಗಳು ,ವಿಮಾನ ನಿಲ್ದಾನ,ರೈಲು ನಿಲ್ದಾಣ, ಬಸ್ ನಿಲ್ದಾಣ ಗಳ ಕ್ಯಾಂಟಿನ ಗಳಿಗೆ
ಪ್ರಮುಖ ದೇವಸ್ಥಾನದ ಗಳಲ್ಲಿ ಪ್ರಸಾದ ವಿನಿಯೋಗ ಮಾಡಲು ಮತ್ತು ಸರ್ಕಾರಿ ಕಛೇರಿಗಳಲ್ಲಿ / ವೃದ್ದಾಶ್ರಮ, ಪ್ರಮುಖ ಖಾಸಗಿ ವಲಯದ ಕಛೇರಿಗಳಿಗೆ ಆದ್ಯತೆ ಮೇರೆಗೆ ವಾಣಿಜ್ಯ ಬಳಕೆಯ ಸಿಲಿಂಡರ್ ಗಳನ್ನು ವಿತರಿಸಲು ಸೂಚಿಸಲಾಗಿದೆ.

ಇಂದು ರಾಜ್ಯದಾದ್ಯಂತ 14.2 kg ಯ ಗೃಹ ಬಳಕೆಯ ಒಟ್ಟು 3,86,363 ಸಿಲಿಂಡರ್ ಹಾಗೂ ವಾಣಿಜ್ಯ ಬಳಕೆಯ 6371 ಸಿಲಿಂಡರ್ ಗಳನ್ನು ವಿತರಣೆ ಮಾಡಲಾಗಿದೆ.
ಗೃಹ ಬಳಕೆಯ ಸಿಲಿಂಡರ್ ಗಳ ಉಪಯೋಗಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.


Share

You cannot copy content of this page