ಸಮಗ್ರ ಸುದ್ದಿ

ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ, ಬಳಕೆ ಹಾಗೂ ಘನ ತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘನೆ| 11,694 ಪ್ರಕರಣಗಳಲ್ಲಿ ರೂ. 78.50 ಲಕ್ಷ ದಂಡ ವಸೂಲಿ: ರಾಜೇಂದ್ರ ಚೋಳನ್

Share

ಬೆಂಗಳೂರು: ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ, ಬಳಕೆ ಉಲ್ಲಂಘನೆಯ 7,047 ಪ್ರಕರಣಗಳಿಗೆ ರೂ. 54.69 ಲಕ್ಷ ದಂಡ ವಿಧಿಸಿದೆ ಹಾಗೂ ಘನ ತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘನೆ 4,647 ಪ್ರಕರಣಗಳಿಗೆ ರೂ.30.64 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ತಿಳಿಸಿದ್ದಾರೆ.

ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಹಾಗೂ ಉಪಯೋಗ ಮಾಡದಂತೆ ಸಾರ್ವಜನಿಕರಲ್ಲಿ ಮನವಿ

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆ ಮಾಡದಂತೆ ಸಾರ್ವಜನಿಕರಲ್ಲಿ ನಿರಂತರವಾಗಿ ಜನಜಾಗೃತಿ ಮೂಡಿಸಲಾಗುತ್ತಿದೆ. ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಹಾಗೂ ಉಪಯೋಗ ಮಾಡದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು *ಕೇಂದ್ರ ನಗರ ಪಾಲಿಕೆಯ ರಚನೆಯಾದಾಗಿನಿಂದ ಸೆಪ್ಟೆಂಬರ್ -2025 ರಿಂದ ಇಲ್ಲಿಯವರೆಗೆ ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಉಲ್ಲಂಘನೆ ಮಾಡುವ ಅಂಗಡಿ ಮುಂಗಟ್ಟುಗಳು, ವ್ಯಾಪಾರಸ್ಥರನ್ನು ಗುರುತಿಸಿ, ಸುಮಾರು 7,047 ಪ್ರಕರಣಗಳಿಗೆ ರೂ. 54.69 ಲಕ್ಷ ದಂಡ ವಿಧಿಸಲಾಗಿದೆ.

ಅದೇ ರೀತಿಯಲ್ಲಿ ನಗರ ನೈರ್ಮಲ್ಯ ಕಾಪಾಡುವುದು ನಗರ ಪಾಲಿಕೆಯ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರೂ ಸಹ ನಗರ ಪಾಲಿಕೆಯೊಂದಿಗೆ ಕೈಜೋಡಿಸಿದಲ್ಲಿ ಮಾತ್ರ ಅದು ಯಶಸ್ವಿ ಹಾಗೂ ಪರಿಣಾಮಕಾರಿಯಾಗಲಿದೆ.

ಆದರೆ ಸಾರ್ವಜನಿಕರು, ಹೋಟೆಲ್ ಗಳು, ವ್ಯಾಪಾರೋದ್ದಿಮೆಗಳು, ಬಲ್ಕ್ ಜನರೇಟರ್ಸ್ ಗಳು ತ್ಯಾಜ್ಯ ವಿಂಗಡಣೆ ಮಾಡದೇ, ಹಾಗೂ ರಸ್ತೆ ಬದಿ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದರಿಂದ ಬ್ಲ್ಯಾಕ್ ಸ್ಪಾಟ್ ಗಳು ನಿರ್ಮಾಣವಾಗಿ ನಗರದ ನೈರ್ಮಲ್ಯ ಹಾಗೂ ಸೌಂದರ್ಯ ಹಾಳಾಗುತ್ತಿದೆ. ಇದನ್ನು ತಡೆಗಟ್ಟಲು ಕೇಂದ್ರ ನಗರ ಪಾಲಿಕೆಯ ತ್ಯಾಜ್ಯ ನಿರ್ವಹಣೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೂಲಕ ದಂಡ ವಿಧಿಸಲಾಗಿರುತ್ತದೆ. ಹಾಗೂ ನಿರಂತರ ಎಚ್ಚರಿಕೆ ನೀಡಲಾಗುತ್ತಿದೆ.

ನಗರ ನೈರ್ಮಲ್ಯ ಕಾಪಾಡುವಲ್ಲಿ ಸಾರ್ವಜನಿಕರು ಕೇಂದ್ರ ನಗರ ಪಾಲಿಕೆಗೆ ಸಹಕರಿವುದು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ತ್ಯಾಜ್ಯ ಎಲ್ಲೆಂದರಲ್ಲಿ ಎಸೆಯದೇ, ಮನೆ, ಮನೆ ಬರುವ ಆಟೋ ಟಿಪ್ಪರ್ ಗಳಿಗೆ ವಿಂಗಡಣೆ ಮಾಡಿ ನೀಡಲು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ರವರು ಮನವಿ ಮಾಡಿದ್ದಾರೆ.

ವ್ಯಾಪಾರಸ್ಥರು, ಉದ್ದಿಮೆಗಳು, ಹೋಟೆಲ್ ನವರು, ಸಾರ್ವಜನಿಕರು ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಮಾರಾಟ ಹಾಗೂ ಉಪಯೋಗ ಮಾಡದಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ ಹಾಗೂ *ಉತ್ಪಾದನೆಯನ್ನು ಸಹ ಮಾಡದಂತೆ ಉತ್ಪಾದಕರಿಗೆ ಎಚ್ಚರಿಕೆ ನೀಡಿದ್ದಾರೆ.


Share

You cannot copy content of this page