ರಾಜಕೀಯ

ಉಪ‌‌ ಚುನಾವಣೆ ನಮಗೆ ಪ್ರತಿಷ್ಠೆಯಾಗಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Share


ಬೆಂಗಳೂರು: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಪಕ್ಷದ ಪಾಲಿಗೆ ಪ್ರತಿಷ್ಠೆಯಾಗಿದೆ. ನಮಗೆ ಗೆಲುವೇ ಮಾನದಂಡ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ದಾವಣಗೆರೆ ದಕ್ಷಿಣ ವಿಧಾನಸಭೆ ಉಪ‌ ಚುನಾವಣೆ ಉಸ್ತುವಾರಿ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇಂದಿನ ಸಭೆಯಲ್ಲಿ 8 ಜನರ ಹೆಸರು ಚರ್ಚೆ ಆಗಿದೆ ಎಂದರು.

ಜಿಲ್ಲಾ ಹಾಗೂ ತಾಲೂಕು ಪಂಚಾಯತ್, ಜಿಬಿಎ ಹಾಗೂ 2028ರ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ‌ಕೆಲಸ ಮಾಡಬೇಕಿದೆ. ಮುಖ್ಯ ಮಂತ್ರಿ, ಉಪಮುಖ್ಯಮಂತ್ರಿ ಅವರು ಹೈಕಮಾಂಡ್ ಜೊತೆ ಚರ್ಚಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಸಚಿವರು ಹೇಳಿದರು.

ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದರಾಗಿದ್ದೇವೆ. ಹೆಸರು ಘೋಷಣೆ ಆದ ಮೇಲೆ ಗೊಂದಲ ಸರಿ ಹೋಗುತ್ತದೆ. ಎಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಘೋಷಣೆ ಮಾಡಲಾಗುತ್ತದೆ. ಯಾರೆ ಆಗಲಿ ಟಿಕೆಟ್ ಕೇಳೋದರಲ್ಲಿ ತಪ್ಪಿಲ್ಲ. ಟಿಕೆಟ್ ಘೋಷಣೆ ಬಳಿಕ ಎಲ್ಲರೂ ನಿರ್ಧಾರಕ್ಕೆ ಬದ್ದರಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


Share

You cannot copy content of this page