ಸಮಗ್ರ ಸುದ್ದಿ

ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆ ಬೆಂಗಳೂರು ಮತ್ತು ಮಡಗಾಂವ್ ನಡುವೆ ವಿಶೇಷ ರೈಲು

Share

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು, ನೈಋತ್ಯ ರೈಲ್ವೆಯು ಯಶವಂತಪುರ – ಮಡಗಾಂವ್ – ಬೆಂಗಳೂರು ಕಂಟೋನ್ಮೆಂಟ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಿದೆ.

ರೈಲು ಸಂಖ್ಯೆ 06271 ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು, ಮಾರ್ಚ್ 20 ರಂದು ಬೆಳಿಗ್ಗೆ 11:50ಕ್ಕೆ ಯಶವಂತಪುರದಿಂದ ಹೊರಟು, ಮರುದಿನ (ಶನಿವಾರ) ಬೆಳಿಗ್ಗೆ 06:45ಕ್ಕೆ ಮಡಗಾಂವ್ ತಲುಪಲಿದೆ.

ರೈಲು ಸಂಖ್ಯೆ 06272 ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು, ಭಾನುವಾರ, ಮಾರ್ಚ್ 22 ರಂದು ಬೆಳಿಗ್ಗೆ 11:00 ಗಂಟೆಗೆ ಮಡಗಾಂವ್‌ನಿಂದ ಹೊರಟು, ಮರುದಿನ (ಸೋಮವಾರ) ಬೆಳಿಗ್ಗೆ 05:20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

ನಿಲುಗಡೆಗಳು: ಈ ವಿಶೇಷ ರೈಲುಗಳಿಗೆ ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ಎರಡೂ ದಿಕ್ಕುಗಳಲ್ಲಿ ನಿಲುಗಡೆ ನೀಡಲಾಗಿದೆ.

ಬೋಗಿಗಳ ವಿವರ: ಈ ರೈಲಿನಲ್ಲಿ ಒಟ್ಟು 20 ಬೋಗಿಗಳಿರಲಿದ್ದು, ಇದರಲ್ಲಿ ಒಂದು ಎಸಿ ಫಸ್ಟ್ ಕ್ಲಾಸ್,ಎರಡು ಎಸಿ 2-ಟೈರ್, ಎರಡು ಎಸಿ 3-ಟೈರ್, ಒಂಬತ್ತು ಸ್ಲೀಪರ್ ಕ್ಲಾಸ್, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್ ಮತ್ತು ಎರಡು ಲಗೇಜ್/ಬ್ರೇಕ್ ವ್ಯಾನ್ ಬೋಗಿಗಳು ಇರಲಿವೆ.


Share

You cannot copy content of this page