ರಾಜಕೀಯ

ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್ |ಹೈಕಮಾಂಡ್ ಗೆ ಪಟ್ಟಿ ರವಾನೆ: ಅಲ್ಲಿಯೇ ಅಂತಿಮ ತೀರ್ಮಾನ

Share


ಬೆಂಗಳೂರು:ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸೇರಿದಂತೆ ನಮ್ಮ ನಾಯಕರು ಹೇಳಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರ ಸಭೆ ನಡೆಸಿದ್ದು, ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಎಲ್ಲರ ಅಭಿಪ್ರಾಯದಂತೆ ನಾವು ಹೈಕಮಾಂಡ್ ಗೆ ನಮ್ಮ ಪಟ್ಟಿ ಕಳುಹಿಸುತ್ತೇವೆ. ಅಂತಿಮವಾಗಿ ಅವರು ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದರು.


Share

You cannot copy content of this page