ಶಿಕ್ಷಣ / ಉದ್ಯೋಗ

ಗೆಜೆಟೆಡ್ ಪ್ರೊಬೇಷನರ್ಸ್: ವ್ಯಕ್ತಿತ್ವ ಪರೀಕ್ಷೆ ಮುಂದೂಡಿಕೆ

Share

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಸಂಬಂಧಿಸಿದಂತೆ ನಡೆಸಲು ಉದ್ದೇಶಿಸಿದ್ದ ವ್ಯಕ್ತಿತ್ವ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣಗಳಿಂದಾಗಿ ಸದ್ಯಕ್ಕೆ ಮುಂದೂಡಲಾಗಿದೆ ಎಂದು ಆಯೋಗ ತಿಳಿಸಿದೆ.

ಈ ಹಿಂದೆ ದಿನಾಂಕ: 10-03-2026 ರಂದು ಆಯೋಗದ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದ ವೇಳಾಪಟ್ಟಿಯಂತೆ, ಅರ್ಹ ಅಭ್ಯರ್ಥಿಗಳಿಗೆ ಮಾರ್ಚ್ 23 ರಿಂದ ಮೇ 04 ರವರೆಗೆ ವ್ಯಕ್ತಿತ್ವ ಪರೀಕ್ಷೆ ಹಾಗೂ ಮೂಲ ದಾಖಲೆಗಳ ಪರಿಶೀಲನೆಯನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಅನಿವಾರ್ಯ ಆಡಳಿತಾತ್ಮಕ ಕಾರಣಗಳಿಂದಾಗಿ ಈ ವೇಳಾಪಟ್ಟಿಯನ್ನು ಈಗ ಹಿಂಪಡೆಯಲಾಗಿದೆ.

ವ್ಯಕ್ತಿತ್ವ ಪರೀಕ್ಷೆಯ ಪರಿಷ್ಕೃತ ದಿನಾಂಕಗಳು ಮತ್ತು ಸಮಯದ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಆಯೋಗದ ಅಧಿಕೃತ ವೆಬ್‍ಸೈಟ್‍ನಲ್ಲಿ ಶೀಘ್ರವಾಗಿ ಪ್ರಕಟಿಸಲಾಗುವುದು ಎಂದು ಆಯೋಗದ ಕಾರ್ಯದರ್ಶಿಗಳಾದ ಜ್ಯೋತಿ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share

You cannot copy content of this page