ಸಮಗ್ರ ಸುದ್ದಿ

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ

Share

ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿ ನಾಳೆ ಕೊನೆಯ ದಿನವಾಗಿದೆ.

ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಲ್ಲಿ ತೀವ್ರ ಕಸರತ್ತು ಆರಂಭಗೊಂಡಿದೆ.
ಈಗಾಗಲೇ ಎರಡೂ ಪಕ್ಷಗಳ ಸಂಭವನೀಯ ಅಭ್ಯರ್ಥಿಗಳು ಎರಡು ದಿನಗಳ ಹಿಂದೆಯೇ ಒಂದು ಸೆಟ್ ನಾಮಪತ್ರ ಸಲ್ಲಿಸಿದ್ದಾರೆ.

ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ವೀರಭದ್ರಯ್ಯ ಚರಂತಿ ಮಠ ಅವರನ್ನು ಕಣಕ್ಕಿಳಿಸಿದ್ದು, ದಾವಣಗೆರೆ ದಕ್ಷಿಣದಿಂದ ಶ್ರೀನಿವಾಸ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಇಬ್ಬರೂ ಅಭ್ಯರ್ಥಿಗಳು ಶುಕ್ರವಾರವೇ ನಾಮಪತ್ರ ಸಲ್ಲಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಸಹ ಅಭ್ಯರ್ಥಿಗಳ ಆಯ್ಕೆಗೆ ಅಂತಿಮ ಕಸರತ್ತು ನಡೆಸುತ್ತಿದ್ದು, ನಿನ್ನೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತಿತರರು ಸಭೆ ನಡೆಸಿ, ಹೈಕಮಾಂಡ್ ಗೆ ಅಭ್ಯರ್ಥಿಗಳ ಪಟ್ಟಿ ರವಾನಿಸಿದ್ದಾರೆ.
ಇಂದು ಸಂಜೆಯೊಳಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆಗೊಳಿಸುವ ಸಾಧ್ಯತೆ ಇದೆ.

ದಾವಣಗೆರೆಯಿಂದ ಶ್ಯಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಆಕಾಂಕ್ಷಿಯಾಗಿದ್ದಾರೆ.
ಬಾಗಲಕೋಟೆಯಲ್ಲಿ ಮಾಜಿ ಸಚಿವ ದಿವಂಗತ ಮೇಟಿ ಅವರ ಪುತ್ರ ಮಲ್ಲಿಕಾರ್ಜುನ ಮೇಟಿ ಹಾಗೂ ಮಹಾದೇವಿ ಆಕಾಂಕ್ಷಿಗಳಾಗಿದ್ದಾರೆ.


Share

You cannot copy content of this page