ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಬಾಗಲಕೋಟೆಯಿಂದ ಮಾಜಿ ಸಚಿವ ದಿವಂಗತ ಎಚ್. ವೈ. ಮೇಟಿ ಅವರ ಪುತ್ರ ಉಮೇಶ್ ಮೇಟಿಗೆ ಟಿಕೆಟ್ ನೀಡಿದೆ.
ಅದೇ ರೀತಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ದಿವಂಗತ ಶ್ಯಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮ್ಮರ್ಥ್ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಿಸಿದ್ದಾರೆ.
