ಸಮಗ್ರ ಸುದ್ದಿ

10 ಸಾವಿರ ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆ : ಸಚಿವ ಕೆ.ಹೆಚ್.ಮುನಿಯಪ್ಪ

Share

ಬೆಂಗಳೂರು:ರಾಜ್ಯದಲ್ಲಿ ಸಮಸ್ಯೆಯಾಗಿರುವ ದಿನಬಳಕೆ ಮತ್ತು ವಾಣಿಜ್ಯ ಸಿಲಿಂಡರ್ ಸಮರ್ಪಕ ಪೂರೈಕೆಗಾಗಿ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವರಿಗೆ ಪತ್ರ ಬರೆದಿದ್ದು, ಸ್ಥಳೀಯವಾಗಿ ಸಿಲಿಂಡರ್ ಪೂರೈಸುವ ಸಂಸ್ಥೆಗಳೊಂದಿಗೆ ಖುದ್ದಾಗಿ ಸಭೆ ನಡೆಸಿ ಅಗತ್ಯ ಸಿಲಿಂಡರ್ ಗಳನ್ನು ಪೂರೈಸುವಂತೆ ಮನವಿ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಅವರು ಪರಿಷತ್ತಿಗೆ ಮಾಹಿತಿ ನೀಡಿದರು.

ಪೆಟ್ರೋಲಿಯಂ ಕಂಪನಿಗಳೊಂದಿಗೆ ಇಂದು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಮುಖ್ಯವಾಗಿ ನಾಗರಿಕರ ಆಹಾರ ಪೂರೈಕೆಯ ಹೋಟೆಲ್, ಡಾಬಾ, ಹಾಸ್ಟೆಲ್, ಇಂದಿರಾ ಕ್ಯಾಂಟೀನ್‍ಗಳು ಸೇರಿದಂತೆ ಮುಖ್ಯವಾಗಿ ಆಸ್ಪತ್ರೆಗಳಿಗೆ ಪ್ರತಿನಿತ್ಯ 10 ಸಾವಿರ ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಸಲು ಸರ್ಕಾರ ಕ್ರಮಕೈಗೊಂಡಿದೆ.

ವಾಣಿಜ್ಯ ಸಿಲಿಂಡರ್ ಬಳಕೆದಾರರು ಗೆಯಿಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಕಡ್ಡಾಯವಾಗಿ ನೊಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.


Share

You cannot copy content of this page