ಬೆಂಗಳೂರು: ಬೇಸಿಗೆ ರಜೆಯ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ಮತ್ತು ರಾಮೇಶ್ವರಂ ನಿಲ್ದಾಣಗಳ ನಡುವೆ ಒಂಬತ್ತು ಟ್ರಿಪ್’ಗಳ ವಿಶೇಷ ರೈಲುಗಳನ್ನು ಓಡಿಸಲಿದೆ.
ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ–ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 5, 12, 19, 26 ಹಾಗೂ ಮೇ 3, 10, 17, 24 ಮತ್ತು 31ರಂದು (ಭಾನುವಾರ) ಬೆಳಿಗ್ಗೆ 06:50ಕ್ಕೆ ಹುಬ್ಬಳ್ಳಿಯಿಂದ ಹೊರಟು, ಮರುದಿನ ಬೆಳಿಗ್ಗೆ 05:20ಕ್ಕೆ ರಾಮೇಶ್ವರಂ ತಲುಪಲಿದೆ. ಮರು ಪ್ರಯಾಣದಲ್ಲಿ, ರೈಲು ಸಂಖ್ಯೆ 07356 ರಾಮೇಶ್ವರಂ–ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 6, 13, 20, 27 ಹಾಗೂ ಮೇ 4, 11, 18, 25 ಮತ್ತು ಜೂನ್ 1ರಂದು (ಸೋಮವಾರ) ರಾತ್ರಿ 08:00ಕ್ಕೆ ರಾಮೇಶ್ವರಂನಿಂದ ಹೊರಟು, ಮರುದಿನ ರಾತ್ರಿ 07:40ಕ್ಕೆ ಹುಬ್ಬಳ್ಳಿ ಆಗಮಿಸಲಿದೆ.
ಈ ವಿಶೇಷ ರೈಲುಗಳು ಎರಡೂ ಮಾರ್ಗಗಳಲ್ಲಿ ಶ್ರೀ ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣ (ಹಾವೇರಿ), ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ, ತಿಪಟೂರು, ತುಮಕೂರು, ಬಾಣಸವಾಡಿ, ಹೊಸೂರು, ಧರ್ಮಪುರಿ, ಸೇಲಂ, ನಾಮಕ್ಕಲ್, ಕರೂರು, ತಿರುಚ್ಚಿರಾಪಳ್ಳಿ, ಪುದುಕ್ಕೊಟ್ಟೈ, ಕಾರೈಕುಡಿ, ಶಿವಗಂಗಾ, ಮನಮಧುರೈ ಮತ್ತು ರಾಮನಾಥಪುರಂ ನಿಲ್ದಾಣಗಳಲ್ಲಿ ನಿಲ್ಲಲಿವೆ.
ಈ ವಿಶೇಷ ರೈಲು ಒಂದು ಎಸಿ ಫಸ್ಟ್ ಕ್ಲಾಸ್, ಎರಡು ಎಸಿ ಟು ಟೈರ್, ಮೂರು ಎಸಿ ತ್ರೀ ಟೈರ್, ಆರು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ, ಒಂದು ಪ್ಯಾಂಟ್ರಿ ಕಾರ್, ಒಂದು ಜನರೇಟರ್-ಕಮ್-ಬ್ರೇಕ್ ವ್ಯಾನ್ ಮತ್ತು ಒಂದು ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್/ದಿವ್ಯಾಂಗ ಸ್ನೇಹಿ ಬೋಗಿಗಳನ್ನು ಹೊಂದಿರಲಿದೆ. ಈ ವಿಶೇಷ ರೈಲುಗಳ ಮುಂಗಡ ಕಾಯ್ದಿರಿಸುವಿಕೆ ಆರಂಭವಾಗಿದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.
