ಸಮಗ್ರ ಸುದ್ದಿ

ಜಿಬಿಎ ಹೊರತುಪಡಿಸಿ ರಾಜ್ಯದ ಇತರೆಡೆ ಪ್ರತಿ ದಿನ 6,083 ಟನ್ ತ್ಯಾಜ್ಯ ಸಂಸ್ಕರಣೆ- ಸಚಿವ ರಹೀಂಖಾನ್

Share

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊರತುಪಡಿಸಿ ರಾಜ್ಯದ 325 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರತಿದಿನ ಸುಮಾರು 7,304 ಟನ್ ಘನತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, 6,083 ಟನ್ ಗಳಷ್ಟು ತ್ಯಾಜ್ಯ ಸಂಸ್ಕರಣೆಯಾಗುತ್ತಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಪ್ರಶ್ನೆಗೆ ಉತ್ತರ ನೀಡಿದ ಅವರು, ಕೆಲವು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮರ್ಪಕ ಘನ ತ್ಯಾಜ್ಯ ನಿರ್ವಹಣೆಗೆ ಅಗತ್ಯವಾದ ಸಂಪೂರ್ಣ ಮೂಲಸೌಕರ್ಯಗಳ ಕೊರತೆಯಿರುವುದರಿಂದ ತ್ಯಾಜ್ಯ ವಿಲೇವಾರಿಯಲ್ಲಿ ಸಮಸ್ಯೆಗಳು ಉಂಟಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ.

ಜನ ಸಾಂದ್ರತೆ ಹೆಚ್ಚಿರುವ ಪ್ರಮುಖ ರಸ್ತೆಗಳಲ್ಲಿ ತ್ಯಾಜ್ಯ ಶೇಖರಣೆಯಾಗದಂತೆ ಎಚ್ಚರ ವಹಿಸಲಾಗುತ್ತಿದೆ. ವಾರ್ಡ್ ಮಟ್ಟದಲ್ಲಿ ದೈನಂದಿನ ಸ್ವಚ್ಚತೆ ಮತ್ತು ಮನೆ, ಅಂಗಡಿ, ವಾಣಿಜ್ಯ ಸಂಕೀರ್ಣಗಳಿಂದ ಪ್ರತಿದಿನ ತ್ಯಾಜ್ಯ ಸಂಗ್ರಹಣೆ ಕಾರ್ಯವನ್ನು ನಿಯಮಿತವಾಗಿ ಕೈಗೊಳ್ಳಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಸಚಿವ ರಹೀಂಖಾನ್ ಸದನಕ್ಕೆ ತಿಳಿಸಿದ್ದಾರೆ.


Share

You cannot copy content of this page