ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬಜೆಟ್ ಮಂಡನೆಗೆ ಹಣಕಾಸಿನ ಕೊರತೆ ಇರುವ ಪಾಲಿಕೆಗಳಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದ ಆವರಣದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಬುಧವಾರ ಪ್ರತಿಕ್ರಿಯೆ ನೀಡಿದರು.
ಪಾಲಿಕೆ ಬಜೆಟ್ ವಿಚಾರವಾಗಿ ಕೇಳಿದಾಗ, ಬೆಂಗಳೂರಿನ ಐದು ಪಾಲಿಕೆಗಳು ಪ್ರತ್ಯೇಕ ಬಜೆಟ್ ಮಂಡಿಸಲಿದ್ದು, ಉತ್ತಮ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಶಾಸಕರ ಜತೆಗೂ ಚರ್ಚೆ ಮಾಡಲಾಗಿದೆ. ವಿಕೇಂದ್ರಿಕರಣದಿಂದಾಗಿ ಆಯಾ ಪಾಲಿಕೆಗಳ ಅನುದಾನ ಬೇರೆಡೆಗೆ ವರ್ಗಾವಣೆ ಆಗುವುದಿಲ್ಲ ಎಂದು ಹೇಳಿದರು.
