ಬೆಂಗಳೂರು:ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಂದ್ರ ಸರ್ಕಾರ ಜಿ.ಎಸ್.ಟಿ ಪರಿಹಾರ ನೀಡಿರುತ್ತದೆ. ಈ ಅವಧಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ಒಟ್ಟು ಪರಿಹಾರ 57,351 ಕೋಟಿ ರೂ.ಗಳು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ, 2023ರಿಂದ ಕೇಂದ್ರ ಸರ್ಕಾರ ಜಿ.ಎಸ್.ಟಿ ಪರಿಹಾರ ನೀಡುವುದನ್ನು ನಿಲ್ಲಿಸಿರುತ್ತದೆ. ಆದಕಾರಣ ರಾಜ್ಯದ ರಾಜಸ್ವ ಸಂಗ್ರಹಣೆ ಕಡಿಮೆಯಾಗಿ ರಾಜಸ್ವ ಕೊರತೆಯನ್ನು ಎದುರಿಸಬೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ತಿಳಿಸಿದರು.
ಇಂದು ವಿಧಾನಸಭೆಯ ಕಲಾಪದ ವೇಳೆ ಬಜೆಟ್ ಕುರಿತು ನಡೆದ ಚರ್ಚೆಯ ಮೇಲೆ ಉತ್ತರ ನೀಡುತ್ತಾ 21 ಜನ ವಿರೋಧಪಕ್ಷದವರು, ಆಡಳಿತ ಪಕ್ಷದವರು ಜೆಡಿಎಸ್ ಹಾಗೂ ಉಳಿದವರು ಸೇರಿದಂತೆ ಒಟ್ಟು 50 ಜನ ಮಾತನಾಡಿದ್ದು, ಒಟ್ಟು 24 ಗಂಟೆ 45 ನಿಮಿಷ ಚರ್ಚೆ ನಡೆಸಲಾಗಿದೆ. ನಾನು 17 ಬಜೆಟ್ ಗಳನ್ನು ಮಂಡಿಸಿದ್ದು, ಬಜೆಟ್ ಮೇಲೆ 50 ಜನ ಮಾತನಾಡಿ, ಚರ್ಚೆ ಮಾಡಿರುವುದು ಇದೇ ಮೊದಲು. ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಲು ಅವಕಾಶ ಕೊಟ್ಟ ಸಭಾಧ್ಯಕ್ಷರಿಗೆ, ವಿಫ್ ಮುಖಂಡರಿಗೆ, ಚರ್ಚೆಯಲ್ಲಿ ಭಾಗವಹಿಸಿ, ಬಜೆಟ್ ನ್ನು ಟೀಕೆ, ಸ್ವಾಗತ, ವಿಮರ್ಶೆ ಮಾಡಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿ ಮಾತನಾಡಿದರು.
ಕರ್ನಾಟಕ ರಾಜ್ಯದ ಬಜೆಟ್ ತುಂಬಿದ ಕೊಡ:
ಕರ್ನಾಟಕ ರಾಜ್ಯದ ಬಜೆಟ್ ತುಂಬಿದ ಕೊಡವೇ ಹೊರತು ಖಾಲಿ ಚೊಂಬಾಗಲು ಸಾಧ್ಯವಿಲ್ಲ. ವಿರೋಧಪಕ್ಷದವರು ಬಜೆಟ್ ಮಂಡನೆ ಸಂದರ್ಭದಲ್ಲಿ ಬಜೆಟ್ ನ್ನು ಟೀಕಿಸುತ್ತಾ ಕರ್ನಾಟಕ ಸರ್ಕಾರದ ಬಜೆಟ್ ಖಾಲಿ ಚೊಂಬು ಎಂದು ಟೀಕಿಸಿದ್ದಾರೆ. ನಾನು ಮಂಡಿಸಿರುವ ಬಜೆಟ್ ಜನಪರ ಬಜೆಟ್. ಬಜೆಟ್ ಖಾಲಿ ಚೊಂಬಲ್ಲ ಭರ್ತಿ ಚೊಂಬು ಎಂದು ಸಮರ್ಥಿಸಿದರು. ಬಜೆಟ್ ನ್ನು ಟೀಕಿಸುವಾಗ ರಾಜ್ಯದ ಜನ, ತಜ್ಞರ ಅನಿಸಿಕೆ, ಅಭಿಪ್ರಾಯಗಳನ್ನು ಹಾಗೂ ಪತ್ರಿಕೆಗಳ ಸಂಪಾದಕೀಯಗಳನ್ನು ನೋಡಬೇಕಾದದ್ದು ಅಗತ್ಯವೆಂದು ತಿಳಿಸಿದರು.
ಪ್ರಮುಖ ದಿನಪತ್ರಿಕೆಗಳ ಸಂಪಾದಕೀಯಗಳಲ್ಲಿ ಹಾಗೂ ಆರ್ಥಿಕ ತಜ್ಞರು, ಎಲ್ಲ ಸಮುದಾಯಗಳನ್ನು ತಲುಪಿದ ಬಜೆಟ್, ರಾಜ್ಯದ ಸುಸ್ಥಿರ ಮತ್ತು ಸಶಕ್ತ 11 ಜಿ ಮಾದರಿಯ ಬಜೆಟ್, ನೀರಾವರಿ ಮತ್ತು ಮೂಲಸೌಕರ್ಯಕ್ಕೆ ಒತ್ತು, ಜನಪ್ರಿಯತೆ ಮತ್ತು ವಾಸ್ತವದ ಬಜೆಟ್, ರಾಜ್ಯದ ಬೊಕ್ಕಸವನ್ನು ಸುಸ್ಥಿರವಾಗಿಡುವ ದೂರದೃಷ್ಟಿಯ ಬಜೆಟ್, ನಿರುದ್ಯೋಗ ನಿವಾರಣೆ, ಸಾಮಾಜಿಕ ಭದ್ರತೆ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯದ ಮೇಲೆ ಕೇಂದ್ರಿತ ಹಾಗೂ ಎಲ್ಲರನ್ನೊಳಗೊಂಡ ಬಜೆಟ್, ಹೂಡಿಕೆಗಳಿಗೆ ಹಾಗೂ ನವೋದ್ಯಮಿಗಳಿಗೆ ನೆರವಾಗುವ ಯೋಜನೆಗಳ ಬಜೆಟ್ ಎಂಬ ಸಕಾರಾತ್ಮಕ ಪ್ರತಿಕ್ರಿಯೆಗಳು ಬಂದಿವೆ ಎಂದರು.
ರಾಜ್ಯದ ಆಯವ್ಯಯದ ಗಾತ್ರ, ಬೆಳವಣಿಗೆ:
ರಾಜ್ಯದ ಈ ವರ್ಷದ ಬಜೆಟ್ ಗಾತ್ರ 4,48,004 ಕೋಟಿ ರೂ.ಗಳμÁ್ಟಗಲಿದೆ. 2025-26ರಲ್ಲಿ ನಮ್ಮ ಬಜೆಟ್ ಗಾತ್ರ 4,09,549 ರೂಗಳಷ್ಟಿತ್ತು. ಕಳೆದ ವರ್ಷದ ಆಯವ್ಯಯಕ್ಕೆ ಹೋಲಿಸಿದರೆ ಈ ಆಯವ್ಯಯವು 38,455 ಕೋಟಿ ರೂಗಳಷ್ಟು ಹೆಚ್ಚಿನ ಗಾತ್ರದ್ದಾಗಿದೆ. ಶೇ.9.4ರಷ್ಟು ಬೆಳವಣಿಗೆಯಾಗಿದೆ. ಕೇಂದ್ರ ಸರ್ಕಾರದ ಬಜೆಟ್ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.5.6 ರಷ್ಟು ಮಾತ್ರ ಬೆಳವಣಿಗೆ ಸಾಧಿಸಿದೆ ಎಂದರು.
2017ರಲ್ಲಿ ಜಿಎಸ್ಟಿ ಜಾರಿಯಾದಾಗಿನಿಂದ, 15ನೇ ಹಣಕಾಸು ಆಯೋಗ ಮಾಡಿದ ಅನ್ಯಾಯದಿಂದ, 15ನೇ ಹಣಕಾಸು ಆಯೋಗ ಮಾಡಿದ ಶಿಫಾರಸ್ಸುಗಳನ್ನು ಜಾರಿ ಮಾಡದೆ ಕೇಂದ್ರವು ಮಾಡಿದ ದ್ರೋಹದಿಂದ, ಜಿಎಸ್ಟಿ ಪರಿಹಾರ ನೀಡದ ಕಾರಣ ಸುಮಾರು 2,00,000 ಕೋಟಿ ರೂ.ಗಳಿಗೂ ಹೆಚ್ಚಿನ ನಷ್ಟ ರಾಜ್ಯಕ್ಕೆ ಉಂಟಾಗಿದೆ. ಪರಿಸ್ಥಿತಿ ಹೀಗಾದರೆ ರಾಜ್ಯಗಳ ಆರ್ಥಿಕತೆ ಹೇಗೆ ಉಳಿಯುತ್ತದೆ? ಇಷ್ಟೆಲ್ಲದರ ನಡುವೆಯೂ ನಮ್ಮ ರಾಜ್ಯವನ್ನು ನಾವು ಮುನ್ನಡೆಸುತ್ತಿದ್ದೇವೆ. ಗ್ಯಾರಂಟಿಯಂತ ಜನ ಕಲ್ಯಾಣ ಯೋಜನೆಗಳಿಗಾಗಿ ನಯಾಪೈಸೆ ಖರ್ಚು ಮಾಡದ ಗುಜರಾತ್ ರಾಜ್ಯವು ಈ ಬಾರಿ 1,00,000 ಕೋಟಿ ರೂಗಳಷ್ಟು ಸಾಲ ಮಾಡುತ್ತಿದೆ ಎಂದು ತಿಳಿಸಿದರು.
ರಾಜಸ್ವ ಕೊರತೆ:
ರಾಜಸ್ವ ಕೊರತೆಯು 3-4 ಕಾರಣಗಳಿಂದ ರಾಜಸ್ವ ಕೊರತೆಯ ಸಮಸ್ಯೆ ಉಂಟಾಗಿರುತ್ತದೆ. 15 ನೇ ಹಣಕಾಸು ಆಯೋಗವು ಕಡಿಮೆ ಹಂಚಿಕೆ ಮಾಡಿತ್ತು. ಆಯೋಗವು ಶಿಫಾರಸ್ಸು ಮಾಡಿದ ಅನುದಾನಗಳನ್ನು ಕೇಂದ್ರ ಸರ್ಕಾರ ಕೊಡದೆ ವಂಚಿಸಿತು. ಜಿಎಸ್ಟಿ ಪರಿಹಾರ ನಿಲ್ಲಿಸಲಾಯಿತು, ಜಿಎಸ್ಟಿ ದರಗಳ ಪರಿಷ್ಕರಣೆ, ಜೆಜೆಎಂ ಮುಂತಾದ ಕೇಂದ್ರ ಪುರಸ್ಕøತ ಯೋಜನೆಗಳಿಗೆ ಅನುದಾನ ಕೊಡದೆ ಅನ್ಯಾಯ ಮಾಡಿದ ಕಾರಣ ರಾಜಸ್ವ ಕೊರತೆಯ ಸಮಸ್ಯೆ ಉದ್ಭವಿಸಿತು.
2025-26 ರಲ್ಲಿ ದೇಶದ ಜಿಡಿಪಿಯು ಸ್ಥಿರ ಬೆಲೆಗಳಲ್ಲಿ ಶೇ.7.4 ರಷ್ಟು ಬೆಳವಣಿಗೆ ದಾಖಲಿಸಿದರೆ, ರಾಜ್ಯದ ಜಿ.ಎಸ್.ಡಿ.ಪಿಯು ಶೇ.8.1 ರಷ್ಟು ಬೆಳವಣಿಗೆ ದಾಖಲಿಸಿದೆ. ಕರ್ನಾಟಕದ ಜಿಎಸ್‍ಡಿಪಿ ದೇಶದ ಜಿಡಿಪಿ ಬೆಳವಣಿಗೆಗಿಂತ ಹೆಚ್ಚಿರುವುದು ನಮ್ಮ ಸರ್ಕಾರ ಬಂಡವಾಳ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಅರ್ಥಿಕ ಪ್ರಗತಿಗೆ ಉತ್ತೇಜನ ನೀಡುತ್ತಿರುವುದನ್ನು ಹೇಳುತ್ತದೆ. ಈ ಮೂಲಕ ರಾಜ್ಯದ ಆರ್ಥಿಕತೆಯನ್ನು ದೇಶದಲ್ಲಿಯೇ ನಂ.1 ಮಾಡುವತ್ತ ಹೆಜ್ಜೆಯಿಟ್ಟಿದ್ದೇವೆ ಎಂದರು.
ಇಷ್ಟೆಲ್ಲದರ ನಡುವೆ ನಮ್ಮ ವಿತ್ತೀಯ ಶಿಸ್ತನ್ನು ಹಾಳು ಮಾಡಿಲ್ಲ. ನಮ್ಮ ವಿತ್ತೀಯ ಕೊರತೆ 2026-27ನೇ ಸಾಲಿನಲ್ಲೂ ಶೇ.2.95 ರಷ್ಟಿರಲಿದೆ. ನಮ್ಮ ಜಿ.ಎಸ್.ಡಿ.ಪಿ ಈ ವರ್ಷ 33,05,500 ಕೋಟಿ ರೂ. ಗಳಷ್ಟಿರಲಿದೆ ಎಂದು ಅಂದಾಜು ಮಾಡಲಾಗಿದೆ. ನಮ್ಮ ಒಟ್ಟು ಹೊಣೆಗಾರಿಕೆಗಳು ಜಿ.ಎಸ್.ಡಿ.ಪಿ.ಗೆ ಎದುರಾಗಿ ಶೇ.24.94 ರಷ್ಟಿರಲಿದೆ. ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡದಂತೆ ವಿತ್ತೀಯ ಶಿಸ್ತನ್ನು ಕಾಪಾಡಿಕೊಂಡಿದ್ದೇವೆ. ಆದರೆ ಕೇಂದ್ರ ಸರ್ಕಾರದ ಹೊಣೆಗಾರಿಕೆಗಳು ಜಿ.ಡಿ.ಪಿ.ಗೆ ಎದುರಾಗಿ ಶೇ.55.6 ರಷ್ಟಿದೆ.
ನಿಯಮಾನುಸಾರ ಶೇ.40 ರ ಒಳಗೆ ಇರಬೇಕು. ನಮ್ಮ ವಿತ್ತೀಯ ಕೊರತೆಯು ಜಿಎಸ್‍ಡಿಪಿಯ ಶೇ.3 ರ ಒಳಗೆ ಇದೆ. ಮುಂದಿನ ವರ್ಷಕ್ಕೆ ಶೇ.2.95 ರಷ್ಟು ಇರಲಿದೆ ಎಂಬುದು ನಮ್ಮ ಅಂದಾಜಾಗಿದೆ. ಆದರೆ 2026-27ನೇ ಸಾಲಿಗೆ ಕೇಂದ್ರದ ವಿತ್ತೀಯ ಕೊರತೆ ಜಿ.ಡಿ.ಪಿ.ಯ ಶೇ.4.3 ರಷ್ಟು ಇರಲಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 6 ನೇ ಹಣಕಾಸು ಆಯೋಗದ ಮಾರ್ಗಸೂಚಿಯ ಅನುಸಾರ ರಾಜ್ಯಗಳು ಶೇ.3 ರೊಳಗೆ ಹಾಗೂ ಕೇಂದ್ರ ಸರ್ಕಾರ ಶೇ.4.2 ರೊಳಗೆ ವಿತ್ತೀಯ ಕೊರತೆ ಹೊಂದಿರಬೇಕು. ಇದನ್ನು ಕೇಂದ್ರ ಸರ್ಕಾರ ಅನುಷ್ಠಾನ ಮಾಡಿಲ್ಲ ಎಂಬುದನ್ನು ಸದನದ ಗಮನಕ್ಕೆ ತಂದರು.
2026-27 ನೇ ಆರ್ಥಿಕ ವರ್ಷದ ಬಜೆಟ್ ಗಾತ್ರ 4,48,0004 ಕೋಟಿ ರೂ., 2025-26 ಕ್ಕೆ ಬಜೆಟ್ ಗಾತ್ರ 4,09,549 ಕೋಟಿ ರೂ. ವಿತ್ತು. ಕಳೆದ ವರ್ಷಕ್ಕಿಂತ ಈ ಬಾರಿಯ ಬಜೆಟ್ 38455 ಕೋಟಿ ರೂ., ಶೇ. 9.4 ರಷ್ಟಾಗಿದ್ದು, ಇದು ಆರ್ಥಿಕ ಪ್ರಗತಿಯನ್ನು ಸೂಚಿಸುತ್ತಿದೆ. ಆರ್ಥಿಕ ಹಿಂಜರಿತವಿದಿದ್ದರೆ, ಈ ಪ್ರಗತಿ ಸಾಧ್ಯವಾಗುತ್ತಿರಲಿಲ್ಲ. ಕೇಂದ್ರಕ್ಕೆ ಹೋಲಿಸಿದರೆ, 26-27ರಲ್ಲಿ 53, 47,000 ಕೋಟಿ ಇದೆ. ಪ್ರಗತಿ 5.6% ರಷ್ಟಿದೆ. ಕರ್ನಾಟಕದ ಜಿಡಿಪಿಯು 2026-27 ಕ್ಕೆ 33,05,500 ಕೋಟಿ (8.1% ಪ್ರಗತಿ), ದೇಶದ ಜಿಡಿಪಿಯಲ್ಲಿ ಪ್ರಗತಿ 7.4% ರಷ್ಟು ಮಾತ್ರ. ದೇಶದ ಆರ್ಥಿಕ ಬೆಳವಣಿಗೆಗಿಂತ, ರಾಜ್ಯದ ಆರ್ಥಿಕತೆ ಬೆಳವಣಿಗೆ ಹೆಚ್ಚಿದೆ ಎಂದು ತಿಳಿಸಿದರು.
ವಿತ್ತೀಯ ಕೊರತೆ ಶೇ. 3 ರೊಳಗಿರಬೇಕು, ಒಟ್ಟು ಸಾಲ 25% ರ ಜಿಡಿಪಿಯನ್ನು ಮೀರಬಾರದು ಎಂಬ ಆರ್ಥಿಕ ಶಿಸ್ತನ್ನು ತರಲು ಮಾನದಂಡಗಳನ್ನು ರಾಜ್ಯ ಸರ್ಕಾರ ಪೂರೈಸಿದೆ. ವಿತ್ತೀಯ ಕೊರತೆ 2.95 ರೊಳಗಿದ್ದು, ಸಾಲದ ಮೊತ್ತ 24.94% ರಷ್ಟಿದ್ದು, ಇದು 25% ನ ಮಿತಿಯೊಳಗೆ ಇದೆ. ಬಜೆಟ್ ನಲ್ಲಿ ರೆವಿನ್ಯೂ ಸರ್‍ಪ್ಲಸ್ ಆಗದೇ ವಿತ್ತೀಯ ಕೊರತೆಯಾಗಿದೆ. ಇದಕ್ಕೂ ಪೂರಕ ಕಾರಣಗಳಿವೆ. ವಾಸ್ತವವನ್ನು ತಿಳಿಸಲಾಗುತ್ತಿದೆಯೇ ಹೊರತು ಯಾರನ್ನೂ ದಾರಿ ತಪ್ಪಿಸುತ್ತಿಲ್ಲ. ರಾಜ್ಯ ಸರ್ಕಾರದ ಆಯವ್ಯಯ, ಆರ್ಥಿಕ ಹೊಣೆಗಾರಿಕೆಯ ಮಾನದಂಡಗಳನ್ನು ಪಾಲಿಸಿದೆ ಎಂದರು.
ಸಮ ಸಮಾಜ ನಿರ್ಮಾಣ:
ಡಾ.ಬಿ.ಆರ್.ಅಂಬೇಡ್ಕರ್ ಅವರು, ಸ್ವಾತಂತ್ರ್ಯ ಯಶಸ್ವಿಯಾಗಲು ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ದೊರೆಯಬೇಕು, ಆಗ ಮಾತ್ರ ಸ್ವಾತಂತ್ರ್ಯ ಯಶಸ್ವಿಯಾಗುತ್ತದೆ ಎಂದು ಹೇಳಿದ್ದರು. ಅಲ್ಲದೇ, ವೈರುಧ್ಯತೆಯಿರುವ ಸಮಾಜಕ್ಕೆ ಕಾಲಿಡುತ್ತಿದ್ದು, ಅಸಮಾನತೆಯನ್ನು ತೊಲಗಿಸದೇ, ಸಮಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದಿದ್ದರು. ಅದರಂತೆ ನಮ್ಮ ಸರ್ಕಾರ ಜನರಿಗೆ ಸಾಮಾಜಿಕ ನ್ಯಾಯ ನೀಡಿ, ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವುದು ಮುಖ್ಯ. ನಾವು ಅಧಿಕಾರದಲ್ಲಿದ್ದು, ಜನರಿಗೆ ಒಳಿತು ಮಾಡುವುದು ಅತ್ಯಂತ ಮುಖ್ಯವಾಗಿದೆ. ಮಹಿಳೆಯರು, ರೈತರು, ಕಾರ್ಮಿಕರು, ಹಿಂದುಳಿದವರು, ದೀನದಲಿತರಿಗೆ ಶಕ್ತಿ ತುಂಬಿರುವುದು ಮುಖ್ಯ. ಸಮ ಸಮಾಜವನ್ನು ನಿರ್ಮಾಣ ಮಾಡುವುದು ಕಾಂಗ್ರೆಸ್ ಸಿದ್ದಾಂತ. ಯಾವ ಧರ್ಮವನ್ನು ದ್ವೇಷ ಮಾಡುವಂತೆ ಯಾವ ಧರ್ಮವು ಹೇಳುವುದಿಲ್ಲ ಎಂದು ತಿಳಿಸಿದರು.
ದಕ್ಷಿಣ ಭಾರತದ ನಮ್ಮ ಸುತ್ತ ಮುತ್ತಲ ಪ್ರಗತಿಶೀಲ ರಾಜ್ಯಗಳಿಗೆ ಹೋಲಿಕೆ ಮಾಡಿದರೂ ಸಹ ನಮ್ಮ ವಿತ್ತೀಯ ಕೊರತೆಯ ಪ್ರಮಾಣ ನಿಗಧಿತ ಮಟ್ಟದ ಒಳಗೇ ಇದೆ. 2025-26 ಪರಿಷ್ಕøತ ಅಂದಾಜಿನಲ್ಲೂ ರಾಜ್ಯದ ವಿತ್ತೀಯ ಕೊರತೆ ಶೇ.2.95 ರಷ್ಟು ಇರಲಿದೆ. ಮಹಾರಾಷ್ಟ್ರದಲ್ಲಿ ಶೇ.3.0 ರಷ್ಟು, ಆಂಧ್ರಪ್ರದೇಶ ಶೇ.4.5, ಕೇರಳ ಶೇ.3.8, ತಮಿಳುನಾಡು ಶೇ.3.5 ರಷ್ಟು ಇರಲಿದೆ.
ವಾಸ್ತವವಾಗಿ ರೆವೆನ್ಯೂ ಡಿಫಿಸಿಟ್ ಇರಬಾರದು. ಆದರೆ ಕೇಂದ್ರ ಸರ್ಕಾರ ಒಳಗೊಂಡಂತೆ ಮಹಾರಾಷ್ಟ ಹಾಗೂ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಲ್ಲೂ ರೆವೆನ್ಯೂ ಡಿಫಿಸಿಟ್ ಇದೆ. ಅದರಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳದ್ದೇ ಕಡಿಮೆ ಇದೆ ಎಂದರು.
ಆಯವ್ಯಯ ಅಂದಾಜಿಗೆ ಹೋಲಿಸಿದರೆ ಪಕ್ಕದ ರಾಜ್ಯಗಳ ಸ್ವಂತ ರಾಜಸ್ವ ಸಂಗ್ರಹಣೆಯು ವಾಸ್ತವ/ಪರಿಷ್ಕøತ ಸಂಗ್ರಹಣೆಯಲ್ಲಿ ಕಡಿಮೆ ಆಗಿದೆ. ಕರ್ನಾಟಕ ರಾಜ್ಯದ್ದೊಂದೆ ಸಮಸ್ಯೆಯಲ್ಲ. ಕೇಂದ್ರ ಸರ್ಕಾರದ ಅಪಕ್ವ ಆರ್ಥಿಕ ನೀತಿಗಳಿಂದ ಉಂಟಾಗುತ್ತಿರುವ ಸಮಸ್ಯೆಯಾಗಿದೆ. ಆದರೆ ನಮ್ಮ ಅಕ್ಕ ಪಕ್ಕದ ರಾಜ್ಯಗಳಿಗೆ ಹೋಲಿಸಿದರೂ ಸಹ ನಮ್ಮ ಸ್ವಂತ ರಾಜಸ್ವ ಸಂಗ್ರಹ ಉತ್ತಮವಾಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದವರು ಕಳೆದ ವರ್ಷ ವರ್ಷದ ಮಧ್ಯ ಭಾಗದಲ್ಲಿ ಇದ್ದಕ್ಕಿದ್ದಂತೆ ಜಿಎಸ್ಟಿ ದರಗಳನ್ನು ತರ್ಕಬದ್ಧಗೊಳಿಸುತ್ತೇವೆಂದು ಹೇಳಿ ಪರಿಷ್ಕರಣೆ ಮಾಡಿದ ಕಾರಣಕ್ಕೆ ರಾಜ್ಯದ ಆರ್ಥಿಕತೆಯ ಮೇಲೆ ಹೊಡೆತ ಬಿತ್ತು. 2025-26ನೇ ಸಾಲಿನಲ್ಲಿ ಜಿ.ಎಸ್.ಟಿ ತರ್ಕಬದ್ಧಗೊಳಿಸುವಿಕೆಗೂ ಮುನ್ನ, ರಾಜ್ಯದ ಸರಾಸರಿ ಮಾಸಿಕ ಜಿ.ಎಸ್.ಟಿ ರಾಜಸ್ವ ಸಂಗ್ರಹಣೆಯು ಶೇ.10ರಷ್ಟು ಬೆಳವಣಿಗೆಯನ್ನು ದಾಖಲಿಸಿತ್ತು. ಆದರೆ ದರ ತರ್ಕಬದ್ಧಗೊಳಿಸುವಿಕೆಯ ನಂತರ, ಜಿ.ಎಸ್.ಟಿ ಸಂಗ್ರಹಣೆಯ ಮಾಸಿಕ ಬೆಳವಣಿಗೆಯು ಶೇ.4ಕ್ಕೆ ಕಡಿಮೆಯಾಗಿದೆ. 2025-26ನೇ ಸಾಲಿನಲ್ಲಿ ಸುಮಾರು 10,000 ಕೋಟಿ ಕೊರತೆಯಾದರೆ 26-27ರಲ್ಲಿ 15,000 ಕೋಟಿ ರೂ.ಗಳಷ್ಟು ಕೊರತೆಯಾಗಬಹುದು ಎಂದು ಅಂದಾಜಿಸಲಾಗಿದೆ. ಈ ಕಾರಣದಿಂದಾಗಿ 2025-26ರ ಪರಿಷ್ಕøತ ಅಂದಾಜಿನಲ್ಲಿ 22,957 ಕೋಟಿ ರೂಗಳಷ್ಟು ರಾಜಸ್ವ ಕೊರತೆಯಾಗಿರುತ್ತದೆ.
ರಾಜ್ಯದ ತೆರಿಗೆ ಹಂಚಿಕೆಯ ಪಾಲು 14ನೇ ಹಣಕಾಸು ಆಯೋಗದ ಶಿಫಾರಸ್ಸು ಶೇ.4.713 ರಿಂದ 15ನೇ ಹಣಕಾಸು ಆಯೋಗದ ಶಿಫಾರಸ್ಸು ಶೇ.3.647ಕ್ಕೆ ಇಳಿಕೆಯಾಗಿದ್ದು, ಹಿಂದಿನ ಆಯೋಗದ ಶಿಫಾರಸ್ಸಿಗೆ ಹೋಲಿಸಿದರೆ ಶೇ.23ರಷ್ಟು ಕಡಿಮೆಯಾಗಿದೆ. ರಾಜ್ಯಗಳಿಗೆ ನ್ಯಾಯಯುತ ತೆರಿಗೆ ಹಂಚಿಕೆ ಮಾಡಲು ಸಮಾನತೆ ಮತ್ತು ಬೆಳವಣಿಗೆ ಎರಡಕ್ಕೂ ಪ್ರಾಮುಖ್ಯತೆ ನೀಡುವ ಸೂತ್ರವನ್ನು ಶಿಫಾರಸ್ಸು ಮಾಡಬೇಕು ಎಂದು ರಾಜ್ಯವು 16ನೇ ಹಣಕಾಸು ಆಯೋಗಕ್ಕೆ ಮನವಿ ಮಾಡಿತ್ತು. 16ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ಶೇ.4.131 ರಷ್ಟು ತೆರಿಗೆ ಪಾಲನ್ನು ಶಿಫಾರಸ್ಸು ಮಾಡಿದೆ. ಇದು 15ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ ಪಾಲಿಗಿಂತ ಶೇ.13 ರಷ್ಟು ಹೆಚ್ಚಳವಾಗಿದ್ದು, ನಮ್ಮ ಬೇಡಿಕೆಯನ್ನು ಭಾಗಶಃ ಪರಿಗಣಿಸಿದಂತಾಗಿದೆ. ಆದರೆ ರಾಜ್ಯಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಪಾಲು ಸಿಗಲಿಲ್ಲ ಎಂದು ತಿಳಿಸಿದರು.
ದಕ್ಷಿಣ ಭಾರತದ ನಮ್ಮ ಸುತ್ತ ಮುತ್ತಲ ಪ್ರಗತಿಶೀಲ ರಾಜ್ಯಗಳಿಗೆ ಹೋಲಿಕೆ ಮಾಡಿದರೂ ಸಹ ನಮ್ಮ ವಿತ್ತೀಯ ಕೊರತೆಯ ಪ್ರಮಾಣ ನಿಗಧಿತ ಮಟ್ಟದ ಒಳಗೇ ಇದೆ. 2025-26 ಪರಿಷ್ಕøತ ಅಂದಾಜಿನಲ್ಲೂ ರಾಜ್ಯದ ವಿತ್ತೀಯ ಕೊರತೆ ಶೇ.2.95 ರಷ್ಟು ಇರಲಿದೆ. ಮಹಾರಾಷ್ಟ್ರದಲ್ಲಿ ಶೇ.3.0 ರಷ್ಟು, ಆಂಧ್ರಪ್ರದೇಶ ಶೇ.4.5, ಕೇರಳ ಶೇ.3.8, ತಮಿಳುನಾಡು ಶೇ.3.5 ರಷ್ಟು ಇದೆ. ಎಲ್ಲಾ ರಾಜ್ಯಗಳು ವಿತ್ತೀಯ ಕೊರತೆಯಿದೆ. ನಮ್ಮ ರಾಜ್ಯದ ವಿತ್ತೀಯ ಕೊರತೆ 0.7 ಇದೆ. ಕೇಂದ್ರ ಸರ್ಕಾರದ ವಿತ್ತೀಯ ಕೊರತೆ 1.5 ರಷ್ಟಿದೆ.
2014 ರಲ್ಲಿ ಮೋದಿಯವರು ಪ್ರಧಾನಿಯಾದಾಗ, ಸಾಲದ ಮೊತ್ತ 53,11,000 ಕೋಟಿ, ಅವರು ಬಂದ ಅವಧಿಯಿಂದ ಇಂದಿಗೆ 218 ಲಕ್ಷ ಕೋಟಿಗೆ ಸಾಲದ ಮೊತ್ತ ಏರಿಕೆಯಾಗಿದೆ. ಅವರ ಅವಧಿಯಲ್ಲಿ 165 ಲಕ್ಷ ಕೋಟಿ ಸಾಲವನ್ನು ಮಾಡಿದ್ದಾರೆ. ಮೋದಿಯವರು ದೇಶವನ್ನು ಸಾಲಕ್ಕೆ ದೂಡಿದ್ದಾರೆ. ಈ ವರ್ಷ 16,96,000 ಕೋಟಿ ಸಾಲ ಮಾಡಿದ್ದಾರೆ. ನಿಯಮಗಳ ಪ್ರಕಾರ ಸಾಲದ ಮೊತ್ತ 40 ರಷ್ಟಿರಬೇಕಿದ್ದು, ಕೇಂದ್ರದ ಈ ಪ್ರಮಾಣ 56 ರಷ್ಟು ಹೆಚ್ಚಿದೆ. ಆದರೆ ನಮ್ಮ ಸರ್ಕಾರ ಈ ವರ್ಷ 1,32,000 ಕೋಟಿ ಸಾಲ ಮಾಡಿದೆ.
ದೇಶದಲ್ಲಿ ಜಿಎಸ್ ಟಿ ಸಂಗ್ರಹಣೆಯಲ್ಲಿ ಕರ್ನಾಟಕ ನಂ.2 ರಲ್ಲಿದೆ ಹಾಗೂ ಬಂಡವಾಳ ಹೂಡಿಕೆಯಲ್ಲಿಯೂ ಕರ್ನಾಟಕ ನಂ.2 ಇದೆ.
ರಾಜ್ಯಕ್ಕೆ ಅನ್ಯಾಯವಾದಾಗ ಯಾವುದೇ ಸರ್ಕಾರವಿದ್ದರೂ, ವಿರೋಧಿಸಲೇಬೇಕು. ಕನ್ನಡಿಗರೆಲ್ಲರೂ ಒಗ್ಗಟ್ಟಾಗಿ ಈ ಅನ್ಯಾಯವನ್ನು ವಿರೋಧಿಸಬೇಕು. ಆಯೋಗದಲ್ಲಿ 29% ಶಿಫಾರಸ್ಸು ಮಾಡಿದ್ದು, ಆಗ ನಾನು 40% ಕೊಡಬೇಕೆಂದು ಒತ್ತಾಯಿಸಿದ್ದೆ. ಆಗ ಮೋದಿಯವರು, ಗುಜರಾತಿನ ಮುಖ್ಯಮಂತ್ರಿ ಆಗಿದ್ದಾಗ, ತೆರಿಗೆ ಪಾಲಿನಲ್ಲಿ ಶೇ. 50 ರಷ್ಟು ರಾಜ್ಯಗಳಿಗೆ ಕೊಡಬೇಕೆಂದು ಒತ್ತಾಯಿಸಿದ್ದರು. ಕರ್ನಾಟಕದಿಂದ 4.50 ಲಕ್ಷ ಕೋಟಿಗಿಂತಲೂ ಹೆಚ್ಚು ತೆರಿಗೆ ಸಂಗ್ರಹವಾಗುತ್ತಿದ್ದರೂ, ರಾಜ್ಯಕ್ಕೆ ಮರಳಿ ಬರುವುದು 14-15% ರಷ್ಟು ಮಾತ್ರ.
ಕರ್ನಾಟಕಕ್ಕೆ 14 ನೇ ಆಯೋಗದಲ್ಲಿ 4.713 ರಷ್ಟು ಪಾಲು ದೊರೆಕಿತ್ತು. ಆದರೆ 15 ನೇ ಹಣಕಾಸಿನ ಆಯೋಗದಲ್ಲಿ 3.647 ರμÁ್ಟಗಿ, 1.1 ರಷ್ಟು ಕಡಿಮೆಯಾಗಿ ಅನ್ಯಾಯವಾಗಿತ್ತು.. ಇದರಂತೆ 11495 ಕೋಟಿ ರಾಜ್ಯಕ್ಕೆ ಖೋತಾ ಆಗಿದೆ. ನಮ್ಮ ತೆರಿಗೆ ನಮ್ಮ ಹಕ್ಕು. ಈ ಅನ್ಯಾಯವನ್ನು ಪ್ರಶ್ನಿಸಿ ಪ್ರತಿಭಟನೆ ಮಾಡಲಾಯಿತು. ಕೇಂದ್ರ ಸರ್ಕಾರ 2023-24 ರಲ್ಲಿ ಭದ್ರಾ ಮೇಲ್ದಂಡೆಗೆ ಘೋಷಿಸಿದ 5300 ಕೋಟಿ ಅನುದಾನವನ್ನು ಇದುವರೆಗೂ ಬಿಡುಗಡೆ ಮಾಡಲಿಲ್ಲ. ಆಗಿದ್ದ ರಾಜ್ಯದ ಬಿಜೆಪಿ ಸರ್ಕಾರವೂ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸುವುದಾಗಿ ತಿಳಿಸಿದರು. ಆದರೆ ಈ ಯಾವ ಘೋಷಣೆಗಳು ಫಲ ಕಾಣಲಿಲ್ಲ. ಆದ್ದರಿಂದ ರಾಜ್ಯಕ್ಕಾಗಿರುವ ಅನ್ಯಾಯವನ್ನು ರಾಜ್ಯ ಬಿಜೆಪಿಯವರೂ ಪ್ರಶ್ನಿಸಬೇಕು.
ನ್ಯಾಯಯುತವಾದ ರಾಜ್ಯದ ಪಾಲನ್ನು ನಮಗೆ ನೀಡಿಲ್ಲ. 16 ನೇ ಆಯೋಗದಲ್ಲಿ ಸ್ವಲ್ಪ ಸುಧಾರಣೆಯಾಗಿ 4.131 ರಷ್ಟು ರಾಜ್ಯಕ್ಕೆ ನಿಗಧಿಯಾಗಿದೆ. ಆದರೆ ರಾಜ್ಯ ಕೋರಿದ್ದ 4.7 ರಷ್ಟು ಬರಲಿಲ್ಲ. ಆದ್ದರಿಂದ ಕೇಂದ್ರದ ವಿರುದ್ಧದ ಹೋರಾಟ ಮುಂದುವರೆಯಲಿದೆ. ಸದ್ಯದಲ್ಲಿಯೇ ರಾಜ್ಯದ ಅನುದಾನದ ಬೇಡಿಕೆಯನ್ನಿಟ್ಟು ಪಕ್ಷಾತೀತವಾದ ನಿಯೋಗವೊಂದು ಕೇಂದ್ರಕ್ಕೆ ಹೋಗಬೇಕು ಎಂದು ವಿಧಾನಸಭೆಯಲ್ಲಿ ತಿಳಿಸಿದರು.
