ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ಧನ ವಿನಿಯೋಗ ವಿಧೇಯಕ-2026 ಅನ್ನು ಮಂಡಿಸಿದರು. ನಂತರ ಸದನವು ಈ ವಿಧೇಯಕಕ್ಕೆ ಧ್ವನಿಮತದ ಮೂಲಕ ಅಂಗೀಕಾರ ನೀಡಿತು.
ಈ ಮೂಲಕ 2026-27ನೇ ಹಣಕಾಸು ವರ್ಷದ ಸರ್ಕಾರದ ಒಟ್ಟು ವೆಚ್ಚಗಳಿಗೆ ಅನುಮೋದನೆ ದೊರೆತಂತಾಗಿದೆ.
ಉದ್ದೇಶಗಳು ಮತ್ತು ಕಾರಣಗಳು:
2026-27ನೇ ಹಣಕಾಸು ವರ್ಷದಲ್ಲಿ ಸಂದಾಯ ಮಾಡುವಾಗ ಒದಗಿಬರುವ ಹಲವಾರು ಖರ್ಚುಗಳನ್ನು ವಹಿಸುವುದಕ್ಕಾಗಿ ರಾಜ್ಯದ ಸಂಚಿತ ನಿಧಿಯೊಳಗಿನಿಂದ ವಿನಿಯೋಗಿಸಲು ಭಾರತ ಸಂವಿಧಾನದ 204ನೇ ಅನುಚ್ಛೇದದ ಉಪಬಂಧಗಳಿಗನುಸಾರವಾಗಿ ಈ ವಿಧೇಯಕವನ್ನು ಮಂಡಿಸಲಾಗಿದೆ.
ಕರ್ನಾಟಕ ಧನ ವಿನಿಯೋಗ ವಿಧೇಯಕ-2026 ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಯಿತು.
