ಬೆಂಗಳೂರು: ನಾಳೆಯಿಂದ ಐಪಿಎಲ್ ಪಂದ್ಯಾವಳಿ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಕೆಎಸ್‌ಸಿಎ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸುರಕ್ಷತೆಯ ಕುರಿತಂತೆ ಇಂದು ಮಹತ್ವದ ಸಭೆ ನಡೆಸಿದರು.
ಈ ವೇಳೆ ಪಂದ್ಯಾವಳಿ ಆಯೋಜನೆಗೆ ಇರುವ ಷರತ್ತುಗಳು ಮತ್ತು ಎಚ್ಚರಿಕೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ಅಧಿಕಾರಿಗಳು ಮತ್ತು ಸಂಸ್ಥೆಗಳು ಪಂದ್ಯದ ವೇಳೆ ಹೈ-ಅಲರ್ಟ್ ಆಗಿರಬೇಕು. ಕ್ಷಣ ಕ್ಷಣದ ಮಾಹಿತಿಗಳನ್ನು ಅಧಿಕಾರಿಗಳಿಗೆ ವಿನಿಮಯ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಮೆಟ್ರೋ ರೈಲಿನ ಪ್ರಯಾಣಿಕರ ಸಾಂದ್ರತೆ, ಮೆಟ್ರೋ ಸಂಚರಿಸುವ ವೇಳಾಪಟ್ಟಿ, ಹೆಚ್ಚುವರಿ ಭದ್ರತೆ ಕುರಿತಂತೆಯೂ ಎಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದ್ದಾರೆ.
