ಬೆಂಗಳೂರು: ಶಾಲಾ ಮತ್ತು ಸಾಕ್ಷರತಾ ಇಲಾಖೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 525 ಅಂಕಗಳನ್ನು ಮಾತ್ರ ನಿಗದಿಪಡಿಸಲಾಗಿದೆ ಎಂದು ಶಾಲಾ ಮತ್ತು ಸಾಕ್ಣರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧುಬಂಗಾರಪ್ಪ, ತೃತಿಯ ಭಾಷೆ ಪರೀಕ್ಷೆಯ ಅಂಕಗಳನ್ನು ಅಂಕಪಟ್ಟಿಯಿಂದ ಹೊರಗಿಡಲಾಗಿದ್ದು, ಗ್ರೇಡ್ ಮೂಲಕ ಅಂಕ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಹೊಸ ನಿಯಮವು ಹೊಸ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. ಹಿಂದಿ ಪರೀಕ್ಷೆಯ ಅಂಕವನ್ನು ಎ-ಬಿ-ಸಿ-ಡಿ ಎಂಬ ಗ್ರೇಡ್‌ನಲ್ಲಿ ನೀಡಲಾಗುವುದು. ಇದರಿಂದ ಒಟ್ಟು ಅಂಕಗಳು 625 ರಿಂದ 525ಕ್ಕೆ ಇಳಿಕೆಯಾಗಲಿದೆ. ವಿದ್ಯಾರ್ಥಿಗಳು ತೃತೀಯ ಭಾಷೆಯ ಪರೀಕ್ಷೆ ಬರೆಯುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದ್ದಾರೆ.
