ಬೆಂಗಳೂರು :ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ರಾಜ್ಯದಾದ್ಯಂತ ಇರುವ ಎಲ್ಲಾ ಉಪ ನೋಂದಣಿ ಕಚೇರಿಗಳು (Sub-Registrar Offices) ಈ ವಾರಾಂತ್ಯದ ರಜಾ ದಿನಗಳಾದ ಮಾರ್ಚ್ 28 ಶನಿವಾರ ಮತ್ತು 29 ಭಾನುವಾರದಂದು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಆರ್ಥಿಕ ವರ್ಷದ ಅಂತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ನೋಂದಣಿ ಸೌಲಭ್ಯ ಒದಗಿಸಲು ಈ ಕ್ರಮ ಕೈಗೊಳ್ಳಲಾಗಿದೆ.
ನೋಂದಣಿ ಪ್ರಕ್ರಿಯೆ ಹಾಗೂ ಇಲಾಖೆಯ ಇತರ ಸೇವೆಗಳನ್ನು ಪಡೆಯಲು ಸಾರ್ವಜನಿಕರು ಈ ದಿನಗಳಲ್ಲಿ ಕಚೇರಿಗೆ ಭೇಟಿ ನೀಡಬಹುದಾಗಿದೆ.
ಸಾರ್ವಜನಿಕರು ಈ ವಿಶೇಷ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
