ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ನ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.
ಸನ್ ರೈಸರ್ಸ್ ಹೈದ್ರಾಬಾದ್ ನೀಡಿದ 201 ರನ್ ಗಳ ಬೆನ್ನಟ್ಟಿದ ಆರ್.ಸಿಬಿ ತಂಡವು 15.4 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 203 ರನ್ ಗಳಿಸಿತು. ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟರ್ ದೇವದತ್ ಪಡಿಕ್ಕಲ್ 26 ಎಸೆತಗಳಲ್ಲಿ 61 ರನ್ ಗಳಿಸುವ ಮೂಲಕ ಉತ್ತಮ ಪ್ರದರ್ಶನ ತೋರಿದರು. ಅವರ ಇನ್ನಿಂಗ್ಸ್ ನಲ್ಲಿ 7 ಬೌಂಡರಿ ಮತ್ತು 6 ಸಿಕ್ಸರ್ ಗಳು ಸೇರಿದ್ದವು.
19 ಆವೃತ್ತಿಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿರುವ ಕಿಂಗ್ ಕೊಹ್ಲಿ ಈ ಬಾರಿ ಆರಂಭಿಕ ಪಂದ್ಯದಲ್ಲಿಯೇ ಅರ್ಧ ಶತಕ ಬಾರಿಸಿ ಬೆಂಗಳೂರಿನ ಕ್ರಿಕೆಟ್ ಪ್ರಿಯರಿಗೆ ಸಂಭ್ರಮ ತರಿಸಿದರು.
