ಬೆಂಗಳೂರು:ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ 2023, 2024 ಹಾಗೂ 2025ನೇ ಸಾಲಿನ ಸಂಯಮ ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 31 ಮಂಗಳವಾರ ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ಗಾಂಧೀ ಭವನದಲ್ಲಿರುವ ಮಹಾದೇವ ದೇಸಾಯಿ ಸಭಾಂಗಣದಲ್ಲಿ ನಡೆಯಲಿದೆ.
ಸಂಯಮ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದಾನ ಮಾಡಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಚಿವರಾದ ಎಚ್.ಕೆ.ಪಾಟೀಲ, ಪ್ರಿಯಾಂಕ್ ಖರ್ಗೆ, ಶರಣಬಸಪ್ಪಗೌಡ ದರ್ಶನಾಪುರ, ಶರಣಪ್ರಕಾಶ್ ಆರ್ ಪಾಟೀಲ್ ಹಾಗೂ ಎನ್.ಎಸ್. ಭೋಸರಾಜ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹಾಗೂ ಸಂಸದರಾದ ಪಿ.ಸಿ. ಮೋಹನ್ ಅವರುಗಳು ಭಾಗವಹಿಸಲಿದ್ದಾರೆ.
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಸಂಯಮ ಅಧ್ಯಕ್ಷರಾದ ಶರಣಪ್ಪ ಸಲಾದಪುರ ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ಅವರು ವಹಿಸಲಿದ್ದಾರೆ.
ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಬಿ.ಕಾವೇರಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿ ವಹಿಸಲಿದ್ದಾರೆ.
ಸಂಯಮ ಪ್ರಶಸ್ತಿ ಪಡೆಯುವವರು
2023ನೇ ಸಾಲಿಗೆ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ
ಡಿ.ಆರ್. ಪಾಟೀಲ, 2024ನೇ ಸಾಲಿಗೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ
ಬಿ.ಆರ್. ಪಾಟೀಲ್ ಮತ್ತು 2025ನೇ ಸಾಲಿಗೆ ಕರ್ನಾಟಕ ಗಾಂಧೀ ಸ್ಮಾರಕ ನಿಧಿಯ ಅಧ್ಯಕ್ಷರಾದ ನಾಡೋಜ ಡಾ. ವೂಡೇ ಪಿ. ಕೃಷ್ಣ ಅವರು ಸಂಯಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.
