ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ, ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಏಪ್ರಿಲ್ 1 ಮತ್ತು 2 ರಂದು ಅಧಿಕಾರಿಗಳ ತಂಡ ಮತದಾರರ ಮನೆಗೆ ಭೇಟಿ ನೀಡಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದ್ದಾರೆ.
ಚುನಾವಣಾ ಆಯೋಗದ ನಿರ್ದೇಶನದಂತೆ 85 ವರ್ಷ ಮೇಲ್ಪಟ್ಟವರು ಹಾಗೂ ಶೇ.40ಕ್ಕಿಂತ ಹೆಚ್ಚು ದೈಹಿಕ ಅಶಕ್ತತೆ ಹೊಂದಿರುವ ವಿಶೇಷ ಚೇತನ ಮತದಾರರಿಗೆ ಈ ಸೌಲಭ್ಯ ನೀಡಲಾಗಿದೆ.
ಈಗಾಗಲೇ ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಲು ಇಚ್ಛಿಸಿ ಅರ್ಜಿ ಸಲ್ಲಿಸಿರುವ ಅರ್ಹ ಮತದಾರರ ಮನೆಗೆ ನಿಗದಿಪಡಿಸಿದ ದಿನದಂದು ಚುನಾವಣಾ ಸಿಬ್ಬಂದಿ ತೆರಳಲಿದ್ದಾರೆ. ಬೆಳಿಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಅಂಚೆ ಮತದಾನ ಮಾಡಲು ಸಮಯ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಿರುವ ಮತದಾರರು ನಿಗದಿತ ದಿನದಂದು ತಮ್ಮ ಮನೆಯಲ್ಲಿಯೇ ಲಭ್ಯವಿರಬೇಕು ಎಂದು ಅವರು ತಿಳಿಸಿದ್ದಾರೆ.
