ಸಮಗ್ರ ಸುದ್ದಿ

ಗುಡ್ ಫ್ರೈಡೇ, ಈಸ್ಟರ್ ಹಿನ್ನೆಲೆ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ

Share

ಬೆಂಗಳೂರು: ಗುಡ್ ಫ್ರೈಡೇ ಹಾಗೂ ಈಸ್ಟರ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ, ಮಡಗಾಂವ್ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 06271 ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 2ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಏಪ್ರಿಲ್ 3ರಂದು ಸಂಜೆ 5.30 ಕ್ಕೆ ಮಡಗಾಂವ್ ತಲುಪಲಿದೆ. ಹಿಂದಿರುಗುವ ಪ್ರಯಾಣದಲ್ಲಿ, ರೈಲು ಸಂಖ್ಯೆ 06272 ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 5ರಂದು ಬೆಳಿಗ್ಗೆ 11 ಗಂಟೆಗೆ ಮಡಗಾಂವ್ ನಿಂದ ಹೊರಡಲಿರುವ ಈ ರೈಲು, ಏಪ್ರಿಲ್ 6ರಂದು ಬೆಳಗಿನ ಜಾವ 5.20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

ಈ ವಿಶೇಷ ರೈಲುಗಳು ಮಾರ್ಗಮಧ್ಯೆ ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ, ಕಾರವಾರ ಮತ್ತು ಕಾಣಕೋಣ ನಿಲ್ದಾಣಗಳಲ್ಲಿ ರೈಲು ನಿಲ್ಲಲಿದೆ.

ಹಿಂದಿರುಗುವ ಪ್ರಯಾಣದಲ್ಲಿ ರೈಲು ಸಂಖ್ಯೆ 06272 ಯಶವಂತಪುರ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ. ಎಸ್ಎಂವಿಟಿ ಬೆಂಗಳೂರು ನಿಲ್ದಾಣದಲ್ಲಿ ರೈಲು ನಿಲ್ಲಲಿದೆ.

ಈ ವಿಶೇಷ ರೈಲು ಒಟ್ಟು 19 ಬೋಗಿಗಳನ್ನು ಹೊಂದಿರಲಿದೆ. ಇದರಲ್ಲಿ ಎರಡು ಎಸಿ 2-ಟೈರ್, ಎರಡು ಎಸಿ 3-ಟೈರ್, 9 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.


Share

You cannot copy content of this page