ಸಮಗ್ರ ಸುದ್ದಿ

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ fly91 ವಿಮಾನಯಾನ ಸೇವೆ ಶೀಘ್ರ| ಏಪ್ರಿಲ್ ಎರಡನೇ ವಾರದಿಂದಲೇ ಈ ವಾಣಿಜ್ಯ ನಗರಗಳಿಗೆ fly91 ವಿಮಾನ ಸೇವೆ ಆರಂಭ

Share

ನವದೆಹಲಿ: ವಾಣಿಜ್ಯ ನಗರಿ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕ, ಮಧ್ಯಕರ್ನಾಟಕ ತ್ವರಿತ ಸಂಪರ್ಕಕ್ಕೆ ಅನುಕೂಲ ಆಗುವಂತೆ “ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್” ನಡುವೆ ಅತಿ ಶೀಘ್ರದಲ್ಲೇ ಹೊಸದೊಂದು ವಿಮಾನ ಸೇವೆ ಲಭ್ಯವಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪ್ರಯತ್ನದ ಫಲವಾಗಿ fly91 ವಿಮಾನಯಾನ ಶುರುವಾಗಲಿದೆ.

ಇದೇ ಏಪ್ರಿಲ್ ಎರಡನೇ ವಾರದಿಂದಲೇ fly91 ವಿಮಾನ ಸೇವೆ ಆರಂಭವಾಗಲಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಂಸ್ಥೆಗೆ ಕಾರ್ಯಕ್ಕೆ ಸ್ಥಳಾವಕಾಶ ನೀಡಲಾಗಿದೆ. ಅಂತೆಯೇ fly91 ಸಂಸ್ಥೆ ಈಗಾಗಲೇ ವಿಮಾನಯಾನ ಸೇವೆಯ ಅಗತ್ಯ ಕಾರ್ಯ ಚಟುವಟಿಕೆ ಸಹ ಆರಂಭಿಸಿದೆ.

ಸಚಿವ ಜೋಶಿ ಮನವಿಗೆ ಸ್ಪಂದನೆ: ಹುಬ್ಬಳ್ಳಿಯಿಂದ ಬೆಂಗಳೂರು ಮತ್ತು ಹೈದರಾಬಾದ್ ತೆರಳುವ ನಾಗರಿಕರಿಗೆ ತ್ವರಿತ ಪ್ರಯಾಣಕ್ಕೆ ಅನುಕೂಲ ಆಗುವಂತೆ ವಿಮಾನ ಸೇವೆ ಆರಂಭಿಸುವಂತೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಈ ಹಿಂದೆ ಏರ್ ಲೈನ್ಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಗಮನ ಸೆಳೆದಿದ್ದರು. ಅದರಂತೆ fly91 ಸಂಸ್ಥೆ ಇದೀಗ ಈ ಮಾರ್ಗದಲ್ಲಿ ವಿಮಾನಯಾನಕ್ಕೆ ಅಣಿಯಾಗಿದೆ.

ಏಪ್ರಿಲ್ ಎರಡನೇ ವಾರದಿಂದಲೇ ಈ ಮಾರ್ಗದ ವಿಮಾನಯಾನ ಸೇವೆ ನಾಗರಿಕರಿಗೆ ಲಭ್ಯವಾಗಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಚಿವ ಜೋಶಿ ಅವರ ಮನವಿ ಪುರಸ್ಕರಿಸಿದ fly91 ಸಂಸ್ಥೆ ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ ವಿಮಾನ ಹಾರಾಟಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, HYD to HBX: IC3401; 3:00 PM – 4:30 PM HBX to BLR: IC3411; 4:55 PM – 6:15 PM BLR to HBX: IC3412; 6:45 PM – 8:15 PM HBX to HYD: IC3402; 8:35 PM – 9:55 PM ವಿಮಾನಯಾನ ಸೇವೆಯ ವೇಳಾಪಟ್ಟಿ ಸಹ ಬಿಡುಗಡೆ ಮಾಡಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈಗಾಗಲೇ ಈ ಸಂಸ್ಥೆಗೆ ಕಾರ್ ನಿರ್ವಹಿಸಲು ಸ್ಥಳ ಸಹ ಪೀನೀಡಲಾಗಿದ್ದು, ಸಂಸ್ಥೆಯು ಅವಶ್ಯಕ ಕಾರ್ಯಗಳನ್ನು ಪ್ರಾರಂಭಿಸಿದೆ. ಇದಕ್ಕಾಗಿ ಸಚಿವ ಪ್ರಲ್ಹಾದ ಜೋಶಿ ಅವರು fly91 ಆಡಳಿತ ಮಂಡಳಿಗೆ ಧನ್ಯವಾದ ಅರ್ಪಿಸಿದ್ದಾರೆ.


Share

You cannot copy content of this page