ಸಮಗ್ರ ಸುದ್ದಿ

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು |ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Share

ಬೆಂಗಳೂರು : ಏಪ್ರಿಲ್ 1ರಂದು ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಆಯೋಜಿಸಲಾಗಿರುವ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 119 ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾತ್ರಿ ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ಸಮಯದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಇಲಾಖೆಯ ರಾಜ್ಯ ಖಾತೆ ಸಚಿವರಾದ ವಿ. ಸೋಮಣ್ಣ, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ‌ಮಹಾನಿರ್ದೇಶಕರಾದ ಡಾ.ಎಂ.ಎ. ಸಲೀಮ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಜಿ, ಸೇರಿದಂತೆ ಹಿರಿಯ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

ನಂತರ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಲೋಕ ಭವನಕ್ಕೆ ತೆರಳಿದರು.


Share

You cannot copy content of this page