ಬೆಂಗಳೂರು ನ. 27 : ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಡಿಸೆಂಬರ್ 21 ರಂದು ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಯತೀಶ್ ಆರ್ ತಿಳಿಸಿದ್ದಾರೆ.
ನಗರದ ಬನಶಂಕರಿಯಲ್ಲಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪಲ್ಸ್ ಪೋಲಿಯೋ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 17,27,638 ಜನಸಂಖ್ಯೆ ಇದ್ದು, ಇದರಲ್ಲಿ ನವಜಾತ ಶಿಶುವಿನಿಂದ – 05 ವರ್ಷದೊಳಗಿನ ಮಕ್ಕಳ ಸಂಖ್ಯೆ ಸುಮಾರು 1,99,189 ಇದ್ದಾರೆ ಎಂದು ಮಾಹಿತಿ ನೀಡಿದರು.
ಸುಮಾರು 782 ಬೂತ್ ಗಳಲ್ಲಿ, 39 ಟ್ರಾನಿಟ್ಸ್ ಟೀಂ ಗಳಲ್ಲಿ ಹಾಗೂ 113 ಮೊಬೈಲ್ ಟೀಂ ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಲಾಗುತ್ತದೆ. ಒಟ್ಟು 3128 ಲಸಿಕಾ ಕಾರ್ಯಕರ್ತರು, 157 ಮೇಲ್ವಿಚಾರಕಗಳು ಈ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ರವೀಂದ್ರನಾಥ್ ಎಂ ಮೇಟಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ.ನದೀಮ್ ಅಹಮದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
