ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ನಾಳೆ ಭೇಟಿ ನೀಡಲಿದ್ದಾರೆ. ಶ್ರೀಕೃಷ್ಣನ ದರ್ಶನ ಪಡೆಯಲಿರುವ ಅವರು, ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಕೃಷ್ಣ ಗರ್ಭಗುಡಿಯ ಮುಂಭಾಗದಲ್ಲಿರುವ ಸುವರ್ಣ ತೀರ್ಥ ಮಂಟಪವನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ ಪವಿತ್ರ ಕನಕನ ಕಿಂಡಿಗೆ ಕನಕ ಕವಚವನ್ನು ಅರ್ಪಿಸಲಿದ್ದಾರೆ.
ಲಕ್ಷಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಸಾಧುಗಳ, ವಿದ್ವಂಸರು ಹಾಗೂ ಭಕ್ತರು ಸೇರಿದಂತೆ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸಿ ಭಕ್ತಿ ಸಭೆ ಹಾಗೂ ಭಗವದ್ಗೀತೆಯನ್ನು ಒಟ್ಟಾಗಿ ಪಠಿಸಲಿದ್ದಾರೆ. ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸುವ ಅವರು, ಬಳಿಕ ಉಡುಪಿಗೆ ತೆರಳಲಿದ್ದಾರೆ.
ಪ್ರಧಾನಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಡೋನ್ ಹಾರಾಟ ನಿಷೇಧಿಸಲಾಗಿದೆ. ಶ್ರೀಕೃಷ್ಣ ಮಠಕ್ಕೆ ಏಳು ಗಂಟೆಗಳ ಕಾಲ ಭಕ್ತರಿಗೆ ದರ್ಶನ ನಿರ್ಬಂಧಿಸಲಾಗಿದೆ.
