ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಹಮ್ಮಿಕೊಳ್ಳಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ರವರ 119 ನೇ ಜನ್ಮದಿನಾಚರಣೆ ಪ್ರಯುಕ್ತ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಡಾ.ಬಾಬು ಜಗಜೀವನ ರಾಂ ರವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
