ಬೆಂಗಳೂರು: 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ಫಲಿತಾಂಶವನ್ನು karresults.nic.in ಮೂಲಕ ಅಥವಾ ಕರ್ನಾಟಕ ಒನ್ ಮೊಬೈಲ್ ಆಪ್ ಮೂಲಕವೂ ತಿಳಿದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ
ಮಂಡಳಿ ವತಿಯಿಂದ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್‌ಪ್ ಅಥವಾ ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿ ರವಾನಿಸಲಾಗುತ್ತದೆ. ಈ ವರ್ಷ ಮೊದಲ ಬಾರಿಗೆ ವಿಶೇಷವಾಗಿ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಡಿಜಿ ಲಾಕರ್ ಮೂಲಕ ಅದೇ ದಿನ ಮಧ್ಯಾಹ್ನ 3 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಮಂಡಳಿ ಮಾಹಿತಿ ನೀಡಿದೆ.
