ಸಮಗ್ರ ಸುದ್ದಿ

ಮುಂಬೈ – ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Share

ಬೆಂಗಳೂರು: ಬೇಸಿಗೆಯ ದಿನಗಳಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ಮತ್ತು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸುವುದಾಗಿ ಮಧ್ಯ ರೈಲ್ವೆಯು ಸೂಚಿಸಿದೆ.

ರೈಲು ಸಂಖ್ಯೆ 01013 ಲೋಕಮಾನ್ಯ ತಿಲಕ್ ಟರ್ಮಿನಸ್ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಏಪ್ರಿಲ್ 19 ರಿಂದ ಜುಲೈ 12, 2026 ರವರೆಗೆ ಪ್ರತಿ ಭಾನುವಾರ ಬೆಳಿಗ್ಗೆ 11:50 ಗಂಟೆಗೆ ಲೋಕಮಾನ್ಯ ತಿಲಕ್ ಟರ್ಮಿನಸ್’ನಿಂದ ಹೊರಟು, ಸೋಮವಾರ ಬೆಳಿಗ್ಗೆ 11:45 ಗಂಟೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.

ಮರು ಪ್ರಯಾಣದಲ್ಲಿ, ರೈಲು ಸಂಖ್ಯೆ 01014 ಎಸ್ಎಂವಿಟಿ ಬೆಂಗಳೂರು – ಲೋಕಮಾನ್ಯ ತಿಲಕ್ ಟರ್ಮಿನಸ್ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಏಪ್ರಿಲ್ 20 ರಿಂದ ಜುಲೈ 13, 2026 ರವರೆಗೆ ಪ್ರತಿ ಸೋಮವಾರ ಮಧ್ಯಾಹ್ನ 01:50 ಗಂಟೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಹೊರಟು, ಮಂಗಳವಾರ ಮಧ್ಯಾಹ್ನ 01:30 ಗಂಟೆಗೆ ಲೋಕಮಾನ್ಯ ತಿಲಕ್ ಟರ್ಮಿನಸ್ ತಲುಪಲಿದೆ. ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಒಟ್ಟು 13 ಟ್ರಿಪ್’ಗಳನ್ನು ಪೂರೈಸಲಿವೆ.

ಮಾರ್ಗಮಧ್ಯೆ, ಈ ರೈಲುಗಳು ಠಾಣೆ, ಕಲ್ಯಾಣ್, ಲೋನಾವಾಲಾ, ಪುಣೆ, ಸತಾರಾ, ಕರಾಡ್, ಸಾಂಗ್ಲಿ, ಮಿರಜ್, ರಾಯಬಾಗ್, ಘಟಪ್ರಭಾ, ಬೆಳಗಾವಿ, ಲೋಂಡಾ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿವೆ. ಈ ರೈಲು ಎಸಿ, ಸ್ಲೀಪರ್, ಜನರಲ್ ಮತ್ತು ಎಸ್ಎಲ್ಆರ್’ಡಿ ಬೋಗಿಗಳನ್ನು ಒಳಗೊಂಡ ಒಟ್ಟು 22 ಬೋಗಿಗಳನ್ನು ಹೊಂದಿರುತ್ತದೆ.


Share

You cannot copy content of this page