ಸಮಗ್ರ ಸುದ್ದಿ

ಕೇಂದ್ರ ಸರ್ಕಾರವು ಸಾರ್ವಜನಿಕರ ಹಿತದೃಷ್ಟಿಯಿಂದ ಸಮರ್ಪಕವಾಗಿ ಇಂಧನ ವಿತರಣೆ ಮಾಡಬೇಕು: ಸಚಿವ ಕೆ.ಹೆಚ್. ಮುನಿಯಪ್ಪ

Share

ಬೆಂಗಳೂರು: ಕೇಂದ್ರ ಸರ್ಕಾರವು ಎಲ್ ಪಿಜಿ ಸರಬರಾಜಿನಲ್ಲಿ ವಿಫಲವಾಗಿದೆ ಸಾರ್ವಜನಿಕರ ಹಿತದೃಷ್ಟಿಯಿಂದ ರಾಜ್ಯಕ್ಕೆ ಬೇಕಾಗುವಷ್ಟು ಅನಿಲ‌ ಸರಬರಾಜು ಮಾಡಬೇಕು ಅತ್ಯವಶ್ಯಕವಾಗಿ ಆಟೋ ಚಾಲಕರು ಎಲ್ ಪಿ ಜಿ ಗ್ಯಾಸ್ ಅವಲಂಬಿಸಿ ಜೀವನ ಮಾಡುತ್ತಿರುವುದರಿಂದ ಅವರಿಗೆ ಸಮರ್ಪಕವಾಗಿ ವಿತರಣೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ‌.ಹೆಚ್. ಮುನಿಯಪ್ಪ ತಿಳಿಸಿದರು.

ಬೆಂಗಳೂರಿನಲ್ಲಿಂದು ಸಚಿವರ ನೇತೃತ್ವದಲ್ಲಿ ವಸಂತ ನಗರದ ಆಹಾರ ಭವನದಲ್ಲಿ IOC,BPC,HPC,GAIL ನ ತೈಲ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಆಟೋ ಚಾಲಕರ ಪರವಾಗಿ ಹೆಚ್ಚಿನ ಇಂಧನ ಪೂರೈಕೆ ಮಾಡಲು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕ ಮಾಡುತ್ತಿದ್ದು ಯಾವುದೆ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದರು.

ಕೇಂದ್ರ ಪೆಟ್ರೋಲಿಯಂ ಸಚಿವರಿಗೆ ಪತ್ರ ಬರೆದಿದ್ದು ಇಂದು ಮತ್ತೊಮ್ಮೆ ಕೇಂದ್ರ ಪೆಟ್ರೋಲಿಯಂ ಕಾರ್ಯದರ್ಶಿ ಯವರೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಮಾರುಕಟ್ಟೆಯಲ್ಲಿ ಸರ್ಕಾರದ ದರದಂತೆ ಖಾಸಗಿ ಕಂಪನಿಗಳು ವಿತರಿಸಬೇಕು. ಹೆಚ್ವಿನ ದರ ವಿದಿಸಿ ಗ್ರಾಹಕರಿಗೆ ತೊಂದರೆ ನೀಡಿದ್ದಲ್ಲಿ ಅಂತಹ ಕಂಪನಿಗಳ ವಿರುದ್ದ ಕಾನೂನು ಕ್ರಮ ಜರುಗಿಸಿ ಆಯಾ ಕಂಪನಿಗಳನ್ನು ಸೀಜ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಯುದ್ದ ನಡೆಯುತ್ತಿರುವ ಹಿನ್ನಲೆಯಲ್ಲಿ ಈ ತರಹದ ಆಹಾಕಾರ ಉಂಟಾಗಿರುವ ಹಿನ್ನಲೆಯಲ್ಲಿ ನಾವು ಸಹರಿಸಬೇಕು. ಕೇಂದ್ರ ಸರ್ಕಾರವು ಸರಿಯಾದ ಸಮಯಕ್ಕೆ ವಿತರಿಸಿರುವ ಗ್ಯಾಸ್ ಸಿಲಿಂಡರ್ ಗಳನ್ನು ನಾವು ಸರಬರಾಜು ಮಾಡುತ್ತಿದ್ದು ಇದರಲ್ಲಿ ಅವರ ಮೇಲೆ ಗೂಭೆ ಕೂರಿಸುತ್ತಿಲ್ಲಾ ಅವರು ಏನು ಕೊಡುತ್ತಿದ್ದಾರೆ ಅದನ್ನು ನಾವು ಸರಬರಾಜು ಮಾಡುತ್ತಿದ್ದು ಇದರಲ್ಲಿ ರಾಜ್ಯ ಸರ್ಕಾರದ ನಮ್ಮ ಪಾತ್ರವಿಲ್ಲಾ. ಕೇಂದ್ರ ಸರ್ಕಾರವು ಹಂಚಿಕೆ ಮಾಡುವ ಇಂಧನ ವನ್ನು ನಾವು ರಾಜ್ಯದ ಗ್ರಾಹಕರಿಗೆ ವಿತರಣೆ ಮಾಡುವುದು ಮತ್ತು ಹೆಚ್ಚಿನ ಬೇಡಿಕೆಗೆ ಒತ್ತಡ ತಂದು ವಿತರಿಸಲು ನಾವು ಬದ್ದರಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.

ಕಾಳಸಂತೆಯಲ್ಲಿ ಹೆಚ್ಚಿನ ದರದಲ್ಲಿ ಮಾರಾಟ ಮಾಡುವ ಮಾಲಿಕರ ವಿರುದ್ದ ಕಾನೂನು ಕ್ರಮವಹಿಸಲಾಗುತ್ತದೆ ಮತ್ತು ಗ್ಯಾಸ್ ಸಿಲಿಂಡರ್ ಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ ಎಂದರು.

ಸಭೆಯಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್,ಅರುಂದಿ ಗೊಯಲ್, ದಿವ್ಯ, ಮುರಳಿ ಚಾರ್, ಸುಬ್ರತ್ ಚಟರ್ಜಿ, ರಾಜೇಶ್ ಸಿಂಗ್, ಸಂಜಯ್ ಕುಮಾರ್ ಸಿಂಗ್, ಪ್ರಣಯ ದೇವನಾಗನ್, ರವಿಕುಮಾರ್ ತಂಡಲ್, ಪ್ರಸೂನ್ ಮಾಲಿ ಹಾಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.


Share

You cannot copy content of this page