ರಾಜಕೀಯ

ಕಾಂಗ್ರೆಸ್ ಪಕ್ಷ ಸ್ಟಾಲಿನ್ ಅವರ ಪರವಾಗಿ ನಿಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Share


ಚೆನ್ನೈ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಸಿಎಂ ಸ್ಟಾಲಿನ್ ಅವರ ಪರವಾಗಿ ನಿಲ್ಲಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.

ತಮಿಳುನಾಡು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಶಿವಕುಮಾರ್ ಅವರು ಗುರುವಾರ ಭಾಗವಹಿಸಿ ಮಾತನಾಡಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರು ಈ ಕಾರ್ಯಕ್ರಮಕ್ಕೆ ಶುಭಕೋರಿ ಸಂದೇಶ ರವಾನಿಸಿದ್ದಾರೆ. ಕರ್ನಾಟಕದ ಡಿಸಿಎಂ ಆಗಿ ನಾನು ಈ ಕಾರ್ಯಕ್ರಮಕ್ಕೆ ಬಂದಿಲ್ಲ. ನಮ್ಮ ನಾಯಕರ ಪರವಾಗಿ ನಾನು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ತಿಳಿಸಿದರು.

ಸ್ಟಾಲಿನ್ ಅವರು ನಮ್ಮ ಮೈತ್ರಿಕೂಟದಿಂದ ಸ್ಪರ್ಧೆ ಮಾಡುತ್ತಿರುವ ಹೊಸ ಅಭ್ಯರ್ಥಿಗಳನ್ನು ಪರಿಚಯಿಸಿ, ನಿಮ್ಮ ಮಡಿಲಿಗೆ ಹಾಕಿದ್ದಾರೆ. ನೀವು ನಿಮ್ಮ ಕೈಗಳಿಂದ ಅವರಿಗೆ ಹರಸಿ, ಮತ ಹಾಕಿ ಬೆಂಬಲಿಸಿ. ನಮ್ಮ ಮೈತ್ರಿಕೂಟದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದು, ನಮ್ಮ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಆಮೂಲಕ ಡಿಎಂಕೆ ನೇತೃತ್ವದ ನಮ್ಮ ಮೈತ್ರಿಕೂಟ ಮತ್ತೆ ಗೆದ್ದು ನಿಮ್ಮ ಸೇವೆ, ದೇಶದ ಪ್ರಗತಿಗೆ ಕೆಲಸ ಮಾಡಲಿದೆ” ಎಂದು ಭರವಸೆ ನೀಡಿದರು.


Share

You cannot copy content of this page