ಸಮಗ್ರ ಸುದ್ದಿ

18430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ- ಸಿಎಂ ಸಿದ್ದರಾಮಯ್ಯ | ರಾಜ್ಯದ 15032 ಜನರಿಗೆ ಉದ್ಯೋಗಾವಕಾಶ

Share

ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆಯಲ್ಲಿ ಒಟ್ಟು 18430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 15032 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಗೃಹಕಚೇರಿ ಕೃಷ್ಣಾದಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ‌ ಅವರು, 11 ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ 6 ಹೆಚ್ಚುವರಿ ಬಂಡವಾಳ/ ವಿಸ್ತರಣಾ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 17 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

11 ಹೊಸ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 14906.9 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 13050 ಉದ್ಯೋಗ ಸೃಷ್ಠಿಯಾಗಲಿದೆ. 6 ಹೆಚ್ಚುವರಿ ಬಂಡವಾಳ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಒಟ್ಟು 3523.54 ಕೋಟಿಗಳ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 1982 ಉದ್ಯೋಗ ಸೃಷ್ಟಿಯಾಗುತ್ತಿರುವುದಾಗಿ ತಿಳಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್, ಸಚಿವರಾದ ಎಂ ಬಿ ಪಾಟೀಲ್, ಕೆ ಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಚಲುವರಾಯಸ್ವಾಮಿ ,ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Share

You cannot copy content of this page