ಬೆಂಗಳೂರು:’ವಿಶ್ವ ಕ್ವಾಂಟಮ್ ದಿನಾಚರಣೆ’ಯ (𝗪𝗼𝗿𝗹𝗱 𝗤𝘂𝗮𝗻𝘁𝘂𝗺 𝗗𝗮𝘆) ಪ್ರಯುಕ್ತ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ರಾಜ್ಯದ ತಂತ್ರಜ್ಞಾನ ವಲಯದ ಪ್ರಮುಖ ಮೈಲಿಗಲ್ಲಾದ ‘ಕರ್ನಾಟಕ ರಾಜ್ಯ ಕ್ವಾಂಟಮ್ ಎಕೋ ಸಿಸ್ಟಮ್ ಮ್ಯಾಪ್’ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಬೋಸರಾಜು, ಐಟಿ-ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಉಪಸ್ಥಿತರಿರಲಿದ್ದಾರೆ. ಅಲ್ಲದೆ, ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ವಿವಿಧ ಸ್ಟಾರ್ಟ್-ಅಪ್‌ಗಳ ಪ್ರತಿನಿಧಿಗಳು ಹಾಗೂ ಅಂತಾರಾಷ್ಟ್ರೀಯ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
