ಮಂಡ್ಯ- ಇಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಬಳಿಕ ಭೈರವೈಕ್ಯ ಬಾಲಗಂಗಾಧರನಾಥಶ್ರೀಗಳ ಗದ್ದುಗೆ ಉದ್ಘಾಟಿಸಲಿರುವ ಅವರು, ನಂತರ ಕ್ಷೇತ್ರದ ಅದಿದೇವರಾದ ಕಾಲಭೈರವೇಶ್ವರನ ದರ್ಶನ ಪಡೆಯಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಲಿರುವ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರೊಂದಿಗೆ ಸೌಂದರ್ಯಲಹರಿ ಮತ್ತು ಶಿವಮಹಿಮ್ನ ಸೋತ್ರಮ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮಠದ ಪೀಠಾಧಿಪತಿ ನಿರ್ಮಲಾನಂದನಾಥಶ್ರೀ ಹಾಗೂ ರಾಜ್‌ಕೋಟ್‌ನ ಅರ್ಷ ವಿದ್ಯಾಮಂದಿರದ ಸ್ವಾಮಿ ಪರಮಾತ್ಮಾನಂದ ಸರಸ್ವತಿ ಜೀ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರದ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭಾಗಿಯಾಗಿದ್ದಾರೆ.
