ಬೆಂಗಳೂರು:ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿ ತಲೆಮರೆಸಿಕೊಂಡಿರುವ ಒಂದೇ ಕುಟುಂಬದ ನಾಲ್ವರು ಆರೋಪಿಗಳ ಪತ್ತೆಗಾಗಿ ಬೆಂಗಳೂರು ನಗರದ ಜಯನಗರ ಪೊಲೀಸ್ ಠಾಣೆಯು ಪ್ರಕಟಣೆ ಹೊರಡಿಸಿದೆ.
ಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 182/2025, ಕಲಂ 318, 3(5) ಬಿ.ಎನ್.ಎಸ್ ಮತ್ತು ಕಲಂ 21 ಬಡ್ಸ್ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳು ಸಾರ್ವಜನಿಕರಿಂದ ಹಣ ಪಡೆದು ನಂಬಿಕೆ ದ್ರೋಹ ಎಸಗಿದ್ದು, ಪ್ರಸ್ತುತ ಇವರ ವಿರುದ್ಧ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ.
ಆರೋಪಿಗಳಾದ ಶ್ರೀಮತಿ ಸುಧಾ: ಗಂಡ ಸಿದ್ದಾಚಾರಿ (48 ವರ್ಷ), ಸಿದ್ದಾಚಾರಿ: ತಂದೆ ರಾಮಚಾರಿ (56 ವರ್ಷ), ಯಶವಂತ್: ತಂದೆ ಸಿದ್ದಚಾರಿ (28 ವರ್ಷ) ಮತ್ತು ಕುಮಾರಿ ವರ್ಷಿತಾ: ತಂದೆ ಸಿದ್ದರಾಜು (26 ವರ್ಷ) ಈ ನಾಲ್ವರು ಆರೋಪಿಗಳು ಸದ್ಯ ತಲೆಮರೆಸಿಕೊಂಡಿದ್ದು, ಇವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿದ್ದಲ್ಲಿ ಕೂಡಲೇ ದೂರವಾಣಿ ಸಂಖ್ಯೆ: 9480800155 ಮತ್ತು 080-22094445ಗಳಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ಜಯನಗರ ಠಾಣೆಯ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
