ಸಮಗ್ರ ಸುದ್ದಿ

ಚನ್ನಸಂದ್ರ ನಿಲ್ದಾಣದಲ್ಲಿ ಯಾರ್ಡ್ ಮರುವಿನ್ಯಾಸ ಕಾಮಗಾರಿ ಹಿನ್ನೆಲೆ; ರೈಲುಗಳು ಭಾಗಶಃ ರದ್ದತಿ

Share

ಬೆಂಗಳೂರು: ಚನ್ನಸಂದ್ರ ನಿಲ್ದಾಣದಲ್ಲಿ ಯಾರ್ಡ್ ಮರುವಿನ್ಯಾಸ ಕಾಮಗಾರಿ ನಿಮಿತ್ತ ವಿವಿಧ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುವುದು ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.

ಏಪ್ರಿಲ್ 29 ರಿಂದ ಮೇ 02 ರವರೆಗೆ ಹೊರಡುವ ರೈಲು ಸಂಖ್ಯೆ 11301 ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಸ್ ಮುಂಬೈ – ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಯಲಹಂಕ ಮತ್ತು ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ.

ಏಪ್ರಿಲ್ 30 ರಿಂದ ಮೇ 02 ರವರೆಗೆ ಹೊರಡುವ ರೈಲು ಸಂಖ್ಯೆ 11302 ಕೆಎಸ್ಆರ್ ಬೆಂಗಳೂರು – ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಸ್ ಮುಂಬೈ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಕೆಎಸ್ಆರ್ ಬೆಂಗಳೂರು – ಯಲಹಂಕ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ಈ ರೈಲು ಕೆಎಸ್ಆರ್ ಬೆಂಗಳೂರು ನಿಲ್ದಾಣದ ಬದಲಾಗಿ ಯಲಹಂಕ ನಿಲ್ದಾಣದಿಂದ ನಿಗದಿತ ನಿರ್ಗಮನ ಸಮಯಕ್ಕೆ ಹೊರಡುವುದು.

ಏಪ್ರಿಲ್ 29 ರಿಂದ ಮೇ 01 ರವರೆಗೆ ಹೊರಡುವ ರೈಲು ಸಂಖ್ಯೆ 20687 ಎಸ್‌ಎಸ್‌ಎಸ್ ಹುಬ್ಬಳ್ಳಿ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಯಶವಂತಪುರ ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ.

ಏಪ್ರಿಲ 30 ರಿಂದ ಮೇ 02 ರವರೆಗೆ ಹೊರಡುವ ರೈಲು ಸಂಖ್ಯೆ 20688 ಕೆಎಸ್‌ಆರ್ ಬೆಂಗಳೂರು – ಎಸ್‌ಎಸ್‌ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಕೆಎಸ್‌ಆರ್ ಬೆಂಗಳೂರು ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ರೈಲು ಕೆಎಸ್‌ಆರ್ ಬೆಂಗಳೂರು ನಿಲ್ದಾಣದ ಬದಲಾಗಿ ಯಶವಂತಪುರ ನಿಲ್ದಾಣದಿಂದ ನಿಗದಿತ ನಿರ್ಗಮನ ಸಮಯದಲ್ಲಿ ಹೊರಡಲಿದೆ.

ಏಪ್ರಿಲ್ 30 ಮತ್ತು ಮೇ 01 ರಂದು ಹೊರಡುವ ರೈಲು ಸಂಖ್ಯೆ 18463 ಭುವನೇಶ್ವರ – ಕೆಎಸ್‌ಆರ್ ಬೆಂಗಳೂರು ಪ್ರಶಾಂತಿ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಯಲಹಂಕ ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

ಮೇ 1 ಮತ್ತು 2 ರಂದು ಹೊರಡುವ ರೈಲು ಸಂಖ್ಯೆ 18464 ಕೆಎಸ್ಆರ್ ಬೆಂಗಳೂರು – ಭುವನೇಶ್ವರ ಪ್ರಶಾಂತಿ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಕೆಎಸ್ಆರ್ ಬೆಂಗಳೂರು – ಯಲಹಂಕ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ಈ ರೈಲು ಕೆಎಸ್ಆರ್ ಬೆಂಗಳೂರು ನಿಲ್ದಾಣದ ಬದಲಾಗಿ ಯಲಹಂಕ ನಿಲ್ದಾಣದಿಂದ ನಿಗದಿತ ನಿರ್ಗಮನ ಸಮಯಕ್ಕೆ ಹೊರಡುವುದು.


Share

You cannot copy content of this page