ಸಮಗ್ರ ಸುದ್ದಿ

ಶಿವಾಜಿನಗರದಲ್ಲಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನ ಸಾವು| ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ

Share

ಬೆಂಗಳೂರು: ಬೆಂಗಳೂರಿನ ಶಿವಾಜಿನಗರದಲ್ಲಿ ಬಾರೀ ಮಳೆಯಿಂದ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನ ಸಾವನ್ನಪ್ಪಿದ್ದಾರೆ.‌

ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಎಚ್ಚರವಹಿಸಿದ್ದರೆ ಈ ಅನಾಹುತ ತಪ್ಪಿಸಬಹುದಿತ್ತು ಎಂದ ಅವರು 7 ಜನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸೂಚನೆ ನೀಡಿದ್ದಾರೆ.‌

ಇನ್ನೂ ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಆದೇಶಿಸಿದರು.

ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಸಿಎಂ ಭೇಟಿ ನೀಡಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.


Share

You cannot copy content of this page