ಬೆಂಗಳೂರು: ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ ಸ್ಥಾನಗಳನ್ನು ಪ್ರಕರಣ 5(1) ರಂತೆ ನಿಗದಿಪಡಿಸಿ ಹೊರಡಿಸಲಾದ ಕರಡು ಪ್ರಕಟಣೆಗೆ ಸಾರ್ವಜನಿಕರು ಆಕ್ಷೇಪಣೆಯನ್ನು ಸಲ್ಲಿಸುವ ಅವಧಿಯನ್ನು ಸಾರ್ವಜನಿಕರ ಕೋರಿಕೆಯ ಮೇರೆಗೆ 2026ರ ಮೇ 08ರ ಸಂಜೆ 5:30ರವರೆಗೆ ವಿಸ್ತರಿಸಿದೆ ಎಂದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕರು ಆನ್ ಲೈನ್ ಮೂಲಕ https://rdpr.karnataka.gov.in/rdc/public/ ತಮ್ಮ ಮನವಿಗಳನ್ನು ಸಲ್ಲಿಸಬಹುದು. ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸುವವರು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ, 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/A, ಬಹುಮಹಡಿ ಕಟ್ಟಡ, ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದು.
ರಾಜ್ಯದ 31 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯ ಕುರಿತಂತೆ, ಸ್ವೀಕರಿಸಿದ ಆಕ್ಷೇಪಣೆ/ಅಹವಾಲುಗಳ ಬಗ್ಗೆ ಅದಾಲತ್ ಈ ತಿಂಗಳ 12ರಿಂದ 15ರವರೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗೇಟ್-ನಂ-2, 2ನೇ ಮಹಡಿ, ಬಹುಮಹಡಿಗಳ ಕಟ್ಟಡ, ಕೊಠಡಿ ಸಂಖ್ಯೆ-229 ಬೆಂಗಳೂರು-560001 ಇಲ್ಲಿ ನಡೆಯಲಿದೆ.
ಅದಾಲತ್‌ನಲ್ಲಿ ಭಾಗವಹಿಸಲು ಇಚ್ಛಿಸುವವರು ತಮ್ಮ ಆಧಾರ್ ಅಥವಾ ಗುರುತಿನ ಚೀಟಿ ಅಥವಾ ಸರ್ಕಾರದಿಂದ ನೀಡಿರುವ ಭಾವಚಿತ್ರವುಳ್ಳ ಯಾವುದೇ ಗುರುತಿನ ಚೀಟಿಯ ಪ್ರತಿಯನ್ನು ತಮ್ಮೊಂದಿಗೆ ಕಡ್ಡಾಯವಾಗಿ ತರಬೇಕು ಎಂದು ಆಯೋಗ ತಿಳಿಸಿದೆ ರಾಜ್ಯದ 31 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯ ಕುರಿತಂತೆ, ಸ್ವೀಕರಿಸಿದ ಆಕ್ಷೇಪಣೆ/ಅಹವಾಲುಗಳ ಬಗ್ಗೆ ಅದಾಲತ್ ಅನ್ನು ಮೇ 12, 13,14 ಮತ್ತು 15 ರಂದು ಸೂಚಿಸಿರುವ ಜಿಲ್ಲೆಗಳ ಆಕ್ಷೇಪಣೆಗಳನ್ನು ತೆಗೆದುಕೊಳ್ಳಲಾಗುವುದು.
