ಸಮಗ್ರ ಸುದ್ದಿ

ಇಂದು ವೈದ್ಯಕೀಯ ಪ್ರವೇಶ ಅರ್ಹತಾ ಪರೀಕ್ಷೆ; 22.79 ಲಕ್ಷ ವಿದ್ಯಾರ್ಥಿಗಳು ನೋಂದಣಿ

Share

ಬೆಂಗಳೂರು: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಇಂದು ದೇಶಾದ್ಯಂತ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.

ಸುಮಾರು 22.79 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, ಪ್ರವೇಶ ಪರೀಕ್ಷೆಗಾಗಿ ಪರೀಕ್ಷಾ ಮಂಡಳಿಯು ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ಪ್ರವೇಶದ ವೇಳೆ ಅನುಸರಿಸಬೇಕಾದ ನಿಯಾಮವಳಿಗಳ ಬಗ್ಗೆಯೂ ಎಲ್ಲ ಪರೀಕ್ಷಾ ಕೇಂದ್ರಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ರವಾನಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಆರಂಭವಾಗುವ ಅರ್ಧ ಗಂಟೆಯ ಮೊದಲು ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವುದು ಕಡ್ಡಾಯ. ಸಂಪೂರ್ಣ ತಪಾಸಣೆ ನಡೆಸಿದ ಬಳಿಕ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸಲು ಅನುಮತಿ ನೀಡಲಾಗುತ್ತದೆ.


Share

You cannot copy content of this page