ಸಮಗ್ರ ಸುದ್ದಿ

ರಾಜ್ಯ ಮುಖ್ಯಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲರು

Share

ಬೆಂಗಳೂರು: ಲೋಕಭವನದಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು  ನೂತನವಾಗಿ ನೇಮಕವಾದ ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾದ ನಿವೃತ್ತ ಐಎಎಸ್ ಅಧಿಕಾರಿ ಜಿ.ಸತ್ಯವತಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ನಿವೃತ್ತ ಐಎಎಸ್ ಅಧಿಕಾರಿ ಜಿ.ಸತ್ಯವತಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್, ಇಂಧನ ಸಚಿವರಾದ ಕೆ ಜೆ ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರುಗಳು ಉಪಸ್ಥಿತರಿದ್ದು ನೂತನ ಮುಖ್ಯ ಆಯುಕ್ತರಿಗೆ ಶುಭಾಶಯ ಕೋರಿದರು.


Share

You cannot copy content of this page