ಸಮಗ್ರ ಸುದ್ದಿ

ಕಲಬುರಗಿ ಜಿಲ್ಲೆಯ ನಂದೂರು ಕೆ. ಗ್ರಾಮದಲ್ಲಿ ರೂ.6126.45 ಲಕ್ಷ ವೆಚ್ಚದ ಹೊಸ ಕೈಗಾರಿಕಾ ವಸಾಹತು ಸ್ಥಾಪನೆ: ಸಚಿವ ಪ್ರಿಯಾಂಕ್‌ ಖರ್ಗೆ

Share

ಬೆಂಗಳೂರು: ಕಲಬುರಗಿ ಜಿಲ್ಲೆಯ ನಂದೂರು ಕೆ. ಗ್ರಾಮದಲ್ಲಿ 6126.45 ಲಕ್ಷ ರೂ. ವೆಚ್ಚದಲ್ಲಿ ಹೊಸ ಕೈಗಾರಿಕಾ ವಸಾಹತು ಸ್ಥಾಪಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಭಿಔೃದ್ಧಿ ಮಂಡಳಿ ಸಂಯುಕ್ತವಾಗಿ ಶೇ.50ರ ಅನುಪಾತದಲ್ಲಿ ಈ ವೆಚ್ಚವನ್ನು ಭರಿಸಲಿದೆ. ಈ ಪ್ರದೇಶವು ಹಿಂದುಳಿದ ಪ್ರದೇಶವಾಗಿದ್ದು, ಉದ್ದೇಶಿತ ಕೈಗಾರಿಕಾ ವಸಾಹತು ಸ್ಥಾಪನೆಯಿಂದ ಈ ಭಾಗದ ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಲಭಿಸಲಿದೆ, ಈ ಮೂಲಕ ಕೈಗಾರಕೀಕರಣ ಹಾಗೂ ಕೈಗಾರಿಕೆಯಲ್ಲಿ ಸಬಲೀಕರಣಗೊಳ್ಳಲು ಸಹಾಯಕವಾಗುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆಶಯ ವ್ಯಕ್ತಪಡಿಸಿದ್ದಾರೆ.


Share

You cannot copy content of this page