ನವದೆಹಲಿ: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಈ ತಿಂಗಳ ೩ ರಂದು ನಡೆದ ನೀಟ್ ಯುಜಿ ೨೦೨೬- ಪರೀಕ್ಷೆಯನ್ನು ರದ್ದುಗೊಳಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಿರ್ಧರಿಸಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಎನ್‌ಟಿಎ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಸಮಗ್ರ ತನಿಖೆಗಾಗಿ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ ವಹಿಸಲು ತೀರ್ಮಾನಿಸಲಾಗಿದೆ. ವಿವಿಧ ತನಿಖಾ ಸಂಸ್ಥೆಗಳು ನೀಡಿದ ವರದಿಗಳನ್ನು ಎನ್‌ಟಿಎ, ಸಮನ್ವಯದೊಂದಿಗೆ ಪರಿಶೀಲಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದ್ದು, ಅಗತ್ಯವಿರುವ ಎಲ್ಲಾ ದಾಖಲೆ ಮತ್ತು ಸಹಕಾರವನ್ನು ನೀಡುವುದಾಗಿ ಸಂಸ್ಥೆ ತಿಳಿಸಿದೆ.
ರದ್ದುಗೊಂಡಿರುವ ಪರೀಕ್ಷೆಯನ್ನು ಶೀಘ್ರದಲ್ಲೇ ಮರು ನಡೆಸಲಾಗುವುದು ಮತ್ತು ಅದರ ದಿನಾಂಕಗಳನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಸ್ಪಷ್ಟಪಡಿಸಿದೆ.
