ಸಮಗ್ರ ಸುದ್ದಿ

ನೂತನ ವಿಧಾನ ಸಭಾ ಸದಸ್ಯರುಗಳಿಂದ ಪ್ರಮಾಣ ವಚನ ಸ್ವೀಕಾರ

Share

ಬೆಂಗಳೂರು:ಇತ್ತೀಚೆಗೆ ನಡೆದ ಬಾಗಲಕೋಟೆ ವಿಧಾನ ಸಭಾ ಕ್ಷೇತ್ರ ಹಾಗೂ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ವಿಜೇತರಾದ ಉಮೇಶ ಹುಲ್ಲಪ್ಪ ಮೇಟಿ ಹಾಗೂ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಧಾನಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು..

ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.


Share

You cannot copy content of this page