ನವದೆಹಲಿ: ಜಾಗತಿಕ ಇಂಧನ ಬೆಲೆ ಏರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ ತಲಾ 3 ರೂಪಾಯಿ ಹೆಚ್ಚಿಸಲಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.
ತೈಲ ಕಂಪನಿಗಳು, ಜಾಗತಿಕ ಇಂಧನ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಈ ಹೆಚ್ಚಳ ಮಾಡಿವೆ. ಪರಿಷ್ಕೃತ ದರದಂತೆ ನಾಲ್ಕು ಮಹಾನಗರಗಳ ಪೈಕಿ ದೆಹಲಿಯಲ್ಲಿ ಪೆಟ್ರೋಲ್ ದರ 97.77 ರೂಪಾಯಿಗಳಿಗೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 90.67 ರೂಪಾಯಿಗೆ ಹೆಚ್ಚಳವಾಗಿದೆ.
ಅದೇ ರೀತಿ ಮುಂಬೈನಲ್ಲಿ ಪೆಟ್ರೋಲ್ ದರ 106.68 ರೂಪಾಯಿಗೆ, ಡೀಸೆಲ್ ಬೆಲೆ 93.14 ರೂಪಾಯಿಗಳಿಗೆ ಏರಿಕೆಯಾಗಿದೆ.
ಕೊಲ್ಕತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 108.74 ರೂಪಾಯಿ ಹಾಗೂ ಡೀಸೆಲ್ ಬೆಲೆ 95.13 ರೂಪಾಯಿಗೆ ಹೆಚ್ಚಳವಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 111.90 ರೂಪಾಯಿ ಹಾಗೂ ಡೀಸೆಲ್ ಬೆಲೆ 95.35 ರೂಪಾಯಿಗಳಿಗೆ ಏರಿಕೆಯಾಗಿದೆ.
