ಕೋಲಾರ: ನಗರ ಹೊರವಲಯದ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಉಚಿತ ವೈಜ್ಞಾನಿಕ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿಯು ಡಿಸೆಂಬರ್ 4 ರಿಂದ ಆರಂಭವಾಗಲಿದ್ದು, ಆಸಕ್ತರು ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 50 ವರ್ಷ ವಯೋಮಿತಿಯುಳ್ಳವರು ತಮ್ಮ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ತರಬೇತಿಯಲ್ಲಿ ಭಾಗವಹಿಸಬಹುದು.
ತರಬೇತಿಯು 13 ದಿನಗಳ ಕಾಲಾವಧಿಯದಾಗಿದ್ದು, ತರಬೇತಿ ಅವಧಿಯಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತದೆ. ಅಭ್ಯರ್ಥಿಗಳಿಗೆ ತರಬೇತಿ ವೇಳೆ ಉಚಿತವಾಗಿ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ತರಬೇತಿ ನಂತರ ಕೇಂದ್ರ ಸರ್ಕಾರದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ತರಬೇತುದಾರರ ಮೊ.8971308776, 7760313833 ಸಂಪರ್ಕಿಸಬಹುದಾಗಿದೆ.
