ನವದೆಹಲಿ:ಸುಪ್ರೀಂಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆಯನ್ನು 33 ರಿಂದ 37ಕ್ಕೆ ಹೆಚ್ಚಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದಾರೆ. ಈ ಮೂಲಕ ಭಾರತದ ಮುಖ್ಯ ನ್ಯಾಯಾಧೀಶರು ಸೇರಿದಂತೆ ಸುಪ್ರೀಂ ಕೋರ್ಟ್‌ನ ಒಟ್ಟು ಬಲವು 38ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಕೇಂದ್ರ ಕಾನೂನು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘ್ವಾಲ್ , ಸುಪ್ರೀಂಕೋರ್ಟ್ -ನ್ಯಾಯಾಧೀಶರ ಸಂಖ್ಯೆ – ಕಾಯಿದೆ, 1956 ಕ್ಕೆ ಮತ್ತಷ್ಟು ತಿದ್ದುಪಡಿ ತಂದಿರುವ ʻಸುಪ್ರೀಂ ಕೋರ್ಟ್ -ನ್ಯಾಯಾಧೀಶರ ಸಂಖ್ಯೆ- ತಿದ್ದುಪಡಿ ಸುಗ್ರೀವಾಜ್ಞೆ 2026ʼ ಅನ್ನು ಘೋಷಿಸುವ ಮೂಲಕ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರತುಪಡಿಸಿ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆಯನ್ನು 33 ರಿಂದ 37 ಕ್ಕೆ ಹೆಚ್ಚಿಸಲು ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆʼ ಎಂದು ತಿಳಿಸಿದ್ದಾರೆ.
