ಸಮಗ್ರ ಸುದ್ದಿ

ಮಹಿಳಾ ನೌಕರರಿಗೆ ತಿಂಗಳಿಗೆ ಒಂದರಂತೆ ವಾರ್ಷಿಕ 12 ದಿನ ಋತುಚಕ್ರ ರಜೆ ಜಾರಿ

Share

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರ ಸಮಯದಲ್ಲಿ ತಿಂಗಳಿಗೆ ಒಂದು ದಿನದಂತೆ ವಾರ್ಷಿಕ 12 ದಿನ ವೇತನ ಸಹಿತ ರಜೆ ನೀಡಿ ಸರ್ಕಾರ ಆದೇಶಿಸಿದೆ. ಷರತ್ತುಗಳಿಗೆ ಒಳಪಟ್ಟು ತಕ್ಷಣದಿಂದ ಜಾರಿಯಾಗಿದೆ.

ಸರ್ಕಾರಿ ಕಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ಉದ್ಯೋಗಿಗಳಿಗೂ ಈ ಸೌಲಭ್ಯ ಅನ್ವಯವಾಗಲಿದೆ. ಅಧ್ಯಯನ ಸಮಿತಿ ವರದಿ, ಜಂಟಿ ಸಭೆಗಳು, ಅಭಿಪ್ರಾಯಗಳನ್ನು ಸಂಗ್ರಹಿಸಿ ಅದರ ಆಧಾರದಲ್ಲಿ ಮಹಿಳಾ ನೌಕರರ ಆತ್ಮಸ್ಥೆರ್ಯ ಹೆಚ್ಚಳ, ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಮುಟ್ಟಿನ ರಜೆ ನೀಡಬೇಕು ಎಂದು ಸಚಿವ ಸಂಪುಟ ಸಭೆ ನಿರ್ಣಯಿಸಿತ್ತು.

ರಾಜ್ಯ ಸರ್ಕಾರಿ ಮಹಿಳಾ ಉದ್ಯೋಗಿಗಳ ಜತೆಗೆ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಾಯಿತ ಕೈಗಾರಿಕೆಗಳು, ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ 18 ರಿಂದ 52 ವರ್ಷದೊಳಗಿನ ನೌಕರರಿಗೆ ಈ ಸೌಲಭ್ಯ ಒದಗಿಸಲು ಒಪ್ಪಿಗೆ ನೀಡಿತ್ತು. ಅದರಂತೆಯೇ ರಜಾ ಸೌಲಭ್ಯ ಮಂಜೂರು ಮಾಡಿ, ಆರ್ಥಿಕ ಇಲಾಖೆ ಆದೇಶಿಸಿದೆ.


Share

You cannot copy content of this page