ಬೆಂಗಳೂರು:ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಅಡಿಯಲ್ಲಿ ಹೊಸದಾಗಿ ಪ್ರಾರಂಭಿಸಲಾದ ಬೆಂಗಳೂರು ಉತ್ತರದ ‘ಸರ್ಕಾರಿ ಪಾಲಿಟೆಕ್ನಿಕ್’ ಯಲಹಂಕ ಇಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ಕೋರ್ಸ್‍ಗಳು ಲಭ್ಯವಿದ್ದು, ಪ್ರತಿಯೊಂದು ವಿಭಾಗದಲ್ಲೂ ತಲಾ 60 ಸೀಟುಗಳ ಅವಕಾಶವಿರುತ್ತದೆ.
ಈ ಪ್ರವೇಶಾತಿಯು ‘ಮೊದಲು ಬಂದವರಿಗೆ ಮೊದಲ ಆದ್ಯತೆ’ ಮೇರೆಗೆ ನಡೆಯಲಿದ್ದು, ಆಸಕ್ತ ವಿದ್ಯಾರ್ಥಿಗಳು 2026 ರ ಮೇ 30 ರ ಒಳಗೆ ಅಗತ್ಯ ದಾಖಲಾತಿಗಳೊಂದಿಗೆ ಯಲಹಂಕದ ಅದ್ಧೆ ವಿಶ್ವನಾಥಪುರ (ರಾಜನಕುಂಟೆ) ಬಳಿ ಇರುವ ಕಾಲೇಜು ಆವರಣಕ್ಕೆ ಖುದ್ದಾಗಿ ಹಾಜರಾಗಿ, ಅರ್ಜಿಯನ್ನು ಭರ್ತಿ ಮಾಡಿ ಪ್ರವೇಶ ಪಡೆಯಬಹುದು.
ಪ್ರವೇಶ ಅರ್ಜಿ ನಮೂನೆ ಹಾಗೂ ಮಾಹಿತಿ ಪುಸ್ತಕವನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ www.dte.karnataka.gov.in ಅಥವಾ www.dtetech.karnataka.gov.in/kartechnical ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಚಾರ್ಯರ ಮೊಬೈಲ್ ಸಂಖ್ಯೆ: 9900049360 ಅಥವಾ pplgptyelahanka@gmail.com ಇಮೇಲ್ ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
