ಬೆಂಗಳೂರು: ಪ್ರಸ್ತಾವಿತ ಮಾದಾವರ, ತುಮಕೂರು ಮೆಟ್ರೋ ರೈಲು ಯೋಜನೆಯ ವಿವರವಾದ ಯೋಜನಾ ವರದಿ-ಡಿಪಿಆರ್ ಅನ್ನು ರಾಜ್ಯ ಸರ್ಕಾರ ಸ್ವೀಕರಿಸಿದೆ.
ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಬೆಂಗಳೂರು ಮೆಟ್ರೋ ರೈಲು ನಿಗಮದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಯೋಜನಾ ವರದಿ ಸ್ವೀಕರಿಸಿದರು.
ಬಳಿಕ ಮಾತನಾಡಿದ ಡಾ.ಜಿ.ಪರಮೇಶ್ವರ್ ಅವರು, ಈ ಯೋಜನಾ ವರದಿಯನ್ನು ಚರ್ಚೆ ಮತ್ತು ನಿರ್ಧಾರಕ್ಕಾಗಿ ಸಚಿವ ಸಂಪುಟದ ಮುಂದೆ ಇಡಲಾಗುವುದು. ವರದಿಯಲ್ಲಿ ಈ ಯೋಜನೆಗೆ 20 ಸಾವಿರದ 649 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.
