ಸಮಗ್ರ ಸುದ್ದಿ

ಮೇಕೆದಾಟು; ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟಿಗೆ ಧನ್ಯವಾದ: ಡಿಸಿಎಂ ಡಿ.ಕೆ. ಶಿವಕುಮಾರ್

Share

ನವದೆಹಲಿ:ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ವಜಾಗೊಳಿಸಿದೆ. ಇದು ಕರ್ನಾಟಕ ಪಾಲಿಗೆ ಶುಭಸುದ್ದಿ. ಕರ್ನಾಟಕ ರಾಜ್ಯದ ಜನರ ಪರವಾಗಿ ನಾವು ಸುಪ್ರೀಂ ಕೋರ್ಟಿಗೆ ಧನ್ಯವಾದ ಅರ್ಪಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಸುಪ್ರೀಂ ಕೋರ್ಟ್ ಈ ಹಿಂದಿನ ಆದೇಶದಲ್ಲೇ ನಮಗೆ ಸ್ಪಷ್ಟ ಸೂಚನೆ ನೀಡಿದ್ದು ತಮಿಳುನಾಡಿನ ಪಾಲಿನ 177 ಟಿಎಂಸಿ ನೀರನ್ನು ಹರಿಸಬೇಕು ಎಂದು ಷರತ್ತು ವಿಧಿಸಿದೆ. ಈಗ ಈ ಯೋಜನೆ ಕುರಿತು ತೀರ್ಮಾನ ಮಾಡಬೇಕಿರುವುದು ಕೇಂದ್ರ ಸರ್ಕಾರ. ನಾವು ಪರಿಷ್ಕೃತ ಡಿಪಿಆರ್ ಸಲ್ಲಿಕೆ ಪ್ರಕ್ರಿಯೆಯಲ್ಲಿದ್ದೇವೆ ಎಂದು ತಿಳಿಸಿದರು.


Share

You cannot copy content of this page